ಹಾಸನ : ನವೆಂಬರ್ 23ರಂದು ಉದ್ಯೋಗ ಮೇಳ
ಹಾಸನ, ನವೆಂಬರ್ 17 : ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನವೆಂಬರ್ 23ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.
ಹಾಸನದ ಹೆಸರಾಂತ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುತ್ತಿವೆ. ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಉದ್ಯೋಗ ಮೇಳ ನಡೆಯಲಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಪದವಿ, ಡಿಪ್ಲೊಮಾ, ಎಂಬಿಎ, ಇಂಜಿನಿಯರಿಂಗ್‌ನಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷ ವಯೋಮಾನದ ಯುವಕ/ಯುವತಿಯರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿದವರು, ಅಂಕಪಟ್ಟಿಗಳ ಜೆರಾಕ್ಸ್, ಆಧಾರ್ ಕಾರ್ಡ್, ಸ್ವವಿವರ, ಭಾವಚಿತ್ರದೊಂದಿಗೆ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಜೆ.ಬಿ.ವಿಜಯಲಕ್ಷ್ಮಿ ಅವರನ್ನು ಸಂಪರ್ಕಿಸಬಹುದಾಗಿದೆ.












Click it and Unblock the Notifications