ಹಾಸನದಲ್ಲಿ ನವೆಂಬರ್ 24ರಂದು ಉದ್ಯೋಗ ಮೇಳ

ಹಾಸನ, ನವೆಂಬರ್ 14 : ಹಾಸನದಲ್ಲಿ ನವೆಂಬರ್ 24ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. 18 ರಿಂದ 32 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಬೆಂಗಳೂರು, ಮೈಸೂರು ಮತ್ತು ಹಾಸನದ ಹೆಸರಾಂತ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಉದ್ಯೋಗ ಮೇಳವನ್ನು ನಡೆಸುತ್ತಿವೆ. ನವೆಂಬರ್ 24ರ ಶನಿವಾರ ಬೆಳಗ್ಗೆ 10 ಗಂಟೆಗೆ ಮೇಳ ಆರಂಭವಾಗಲಿದೆ.

8ನೇ ತರಗತಿ, ಎಸ್.ಎಸ್.ಎಲ್.ಸಿ ಉತ್ತೀರ್ಣ/ ಅನುತ್ತೀರ್ಣ, ಪಿ.ಯು.ಸಿ, ಪದವಿ, ಐ.ಟಿ.ಐ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಮತ್ತು ಎಂ.ಬಿ.ಎ ನಲ್ಲಿ ತೇರ್ಗಡೆ ಹೊಂದಿದ 18 ರಿಂದ 32 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Job fair in Hassan on November 24

ಆಸಕ್ತ ನಿರುದ್ಯೋಗಿ ಯುವಕ/ ಯುವತಿಯರು ತಮ್ಮ ವಿದ್ಯಾರ್ಹತೆಯ ದಾಖಲಾತಿಯ ಜೆರಾಕ್ಸ್ ಪ್ರತಿ ಮತ್ತು ವೈಯಕ್ತಿಕ ವಿವರಗಳೊಂದಿಗೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಮೇಳ ನಡೆಯುವ ವಿಳಾಸ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸರ್ಕಾರಿ ಐ.ಟಿ.ಐ ಆವರಣ, ಬಿ.ಎಂ ರಸ್ತೆ, ಹಾಸನ

ಯುವಕ/ಯುವತಿಯರು ಮೇಳದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+