• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಿರಿಯೂರಿನಲ್ಲಿ ಫೆ.18 ರಂದು ಉದ್ಯೋಗ ಮೇಳ: ನೀವೂ ಭಾಗವಹಿಸಿ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಫೆಬ್ರವರಿ 13: ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ(ಎನ್‍ಸಿಎಸ್‍ಪಿ) ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ, ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯೂರು ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಇದೇ ಫೆಬ್ರವರಿ 18ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದ ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಚಿತ್ರದುರ್ಗದಲ್ಲಿ ಫೆ.26 ರಂದು ಉದ್ಯೋಗ ಮೇಳ ನೀವು ಭಾಗವಹಿಸಿಚಿತ್ರದುರ್ಗದಲ್ಲಿ ಫೆ.26 ರಂದು ಉದ್ಯೋಗ ಮೇಳ ನೀವು ಭಾಗವಹಿಸಿ

ಈ ಉದ್ಯೋಗ ಮೇಳದಲ್ಲಿ 15ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲು ಭಾಗವಹಿಸಲಿದ್ದಾರೆ.

ಆಸಕ್ತರು ಅಭ್ಯರ್ಥಿಗಳು ಅಗತ್ಯ ದಾಖಲೆಗಳಾದ ಬಯೋಡೇಟಾ 8 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್ ತರತಕ್ಕದ್ದು. ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಚಿತ್ರದುರ್ಗ ದೂರವಾಣಿ: 08194-230485, 7022459064, 8105619020, 8073037905 ಗೆ ಸಂಪಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Under the National Career Service Scheme (NCSP), a job fair will be held at the Vedavathi Government First Grade College, Hiriyuru, Chitradurga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X