• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದಾವಣಗೆರೆ; ಹೊನ್ನಾಳಿಯಲ್ಲಿ ಮಾರ್ಚ್ 6ರಂದು ಉದ್ಯೋಗ ಮೇಳ

|

ದಾವಣಗೆರೆ, ಮಾರ್ಚ್ 04: ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾರ್ಚ್ 6ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಹಲವಾರು ಖಾಸಗಿ ಕಂಪನಿಗಳು ಮೇಳದಲ್ಲಿ ಪಾಳ್ಗೊಳ್ಳಲಿವೆ.

ದಾವಣಗೆರೆ ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾಳಿ ಜಂಟಿಯಾಗಿ ಉದ್ಯೋಗ ಮೇಳವನ್ನು ಆಯೋಜಿಸಿವೆ. ಆಸಕ್ತರು ಬೆಳಗ್ಗೆ 10 ಗಂಟೆಗೆ ಮೇಳಕ್ಕೆ ಆಗಮಿಸಬಹುದು.

ಹೆಚ್‌ಪಿಸಿಎಲ್ ನೇಮಕಾತಿ; ಏ.15ರೊಳಗೆ ಅರ್ಜಿ ಹಾಕಿ

ಉದ್ಯೋಗ ಮೇಳದಲ್ಲಿ ಹಲವಾರು ಖಾಸಗಿ ಕಂಪನಿಗಳು ಪಾಲ್ಗೊಳ್ಳುತ್ತಿದ್ದು, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ/ ಬಿಬಿಎಂ, ಬಿಸಿಎ ಹಾಗೂ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ.

ಮಡಿಕೇರಿಯಲ್ಲಿ ಕೆಲಸ ಖಾಲಿ ಇದೆ; ಮಾ.30ರೊಳಗೆ ಅರ್ಜಿ ಹಾಕಿ

ಆಸಕ್ತ ಅಭ್ಯರ್ಥಿಗಳು ಮಾರ್ಚ್6ರ ಶನಿವಾರ ಬೆಳಗ್ಗೆ 10 ಗಂಟೆಗೆ ಕನಿಷ್ಠ 10 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಭಾಗವಹಿಸಬಹುದು.

ಜೆಸ್ಕಾಂ ಅಪ್ರೆಂಟಿಸ್ ತರಬೇತಿ; ಮಾರ್ಚ್ 18ರೊಳಗೆ ಅರ್ಜಿ ಹಾಕಿ

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ 08192-259446, 6361550016, 9743636369, 7406323294 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಉದ್ಯೋಗ ಮೇಳ ನಡೆಯುವ ಸ್ಥಳ; ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಟಿ. ಬಿ. ಸರ್ಕಲ್ ಹತ್ತಿರ, ಹೊನ್ನಾಳಿ.

English summary
Davanagere district employment exchange office organized job fair on March 6, 2021 at Honalli first grade college near T. B. Circle.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X