ಬೆಂಗಳೂರಿನಲ್ಲಿ ಮಾರ್ಚ್ 13ರಂದು ಉದ್ಯೋಗ ಮೇಳ
ಬೆಂಗಳೂರು, ಮಾರ್ಚ್ 11; ಬೆಂಗಳೂರು ನಗರದಲ್ಲಿ ಮಾರ್ಚ್ 13ರ ಶನಿವಾರ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 50ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೆಚ್. ಎಸ್. ಆರ್. ಲೇಔಟ್ ಬೆಂಗಳೂರು, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಉಪ ಪ್ರಾದೇಶಿಕ ಉದ್ಯೋಗ ವಿನಿಯಮ ಕೇಂದ್ರ, ಬೆಂಗಳೂರು ಜಂಟಿಯಾಗಿ ಉದ್ಯೋಗ ಮೇಳ ಆಯೋಜನೆ ಮಾಡಿವೆ.
ಉದ್ಯೋಗ ಮೇಳದಲ್ಲಿ ಎಸ್. ಎಸ್. ಎಲ್. ಸಿ ಪಾಸ್/ ಫೇಲ್, ಪಿಯುಸಿ, ಐಟಿಐ ಎಲ್ಲಾ ಟ್ರೇಡ್, ಡಿಪ್ಲೊಮಾ, ಎಲ್ಲಾ ಸಾಮಾನ್ಯ ಪದವೀಧರರು ಹಾಗೂ ಸ್ನಾತಕೋತ್ತರ ಪದವೀಧರರು ಪಾಲ್ಗೊಳ್ಳಬಹುದಾಗಿದೆ.

ಶನಿವಾರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ತನಕ ಸರ್ಕಾರಿ ಪ್ರರ್ಥಮ ದರ್ಜೆ ಕಾಲೇಜು, ಸೆಕ್ಟರ್ -1, 24ನೇ ಮೇನ್, 14ನೇ ಎ ಅಡ್ಡರಸ್ತೆ, ಹೆಚ್. ಎಸ್. ಆರ್. ಬಡಾವಣೆ, ಬೆಂಗಳೂರು -560102 ಇಲ್ಲಿ ಉದ್ಯೋಗ ಮೇಳ ನಡೆಯಲಿದೆ.
50ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. ಆಸಕ್ತ ಯುವಕ/ ಯುವತಿಯರು ಅಗತ್ಯ ದಾಖಲೆಗಳ ಜೊತೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8197239971/8073741245.












Click it and Unblock the Notifications