ಫೆ.2ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

ಬೆಂಗಳೂರು, ಜನವರಿ 31 : ಬೆಂಗಳೂರಿನ ಜಯನಗರದಲ್ಲಿ ಬೃಹತ್ ಕೌಶಲ್ಯ ಮತ್ತು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಫೆ.2ರ ಶುಕ್ರವಾರ ಮೇಳ ನಡೆಯಲಿದೆ.

ಬಿಬಿಎಂಪಿ ಸಹಯೋಗದೊಂದಿಗೆ ಕೌಶಲ್ಯ ಮತ್ತು ಉದ್ಯೋಗ ಮೇಳ ನಡೆಯಲಿದೆ. ಜಯನಗರ 5ನೇ ಬ್ಲಾಕ್‌ನಲ್ಲಿರುವ ಚಂದ್ರಗುಪ್ತ ಮೌರ್ಯ ಮೈದಾನ (ಶಾಲಿನಿ ಗ್ರೌಂಡ್ಸ್‌ನಲ್ಲಿ) ಮೇಳ ನಡೆಯಲಿದ್ದು, ಪ್ರವೇಶ ಉಚಿತ.

ಶುಕ್ರವಾರ ಬೆಳಗ್ಗೆ 9.30 ರಿಂದ 4 ಗಂಟೆಯ ತನಕ ಉದ್ಯೋಗ ಮೇಳ ನಡೆಯಲಿದ್ದು, ಯುವಕ/ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಹಲವಾರು ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.

Job fair in Jayanagar Bengaluru on February 2

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ನೋಂದಣಿ ಶುಲ್ಕವಿಲ್ಲ, ಪ್ರವೇಶ ಉಚಿತ. ಉದ್ಯೋಗ ಮೇಳದಲ್ಲಿ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಮೇಳದಲ್ಲಿ ಪಾಲ್ಗೊಳ್ಳಲು ಬಯಸುವವರು 7835844440 ನಂಬರ್‌ಗೆ ಮಿಸ್ ಕಾಲ್ ನೀಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+