ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಫೆಬ್ರವರಿ 4ರಂದು ಉದ್ಯೋಗ ಮೇಳ

ಬೆಂಗಳೂರಿನ ಜೆ. ಪಿ. ನಗರದಲ್ಲಿ ಫೆಬ್ರವರಿ 4ರ ಶನಿವಾರ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.

|
Google Oneindia Kannada News

ಬೆಂಗಳೂರು, ಫೆಬ್ರವರಿ 03; ಬೆಂಗಳೂರು ನಗರದ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಫೆಬ್ರವರಿ 4ರ ಶನಿವಾರ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಹಲವಾರು ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.

ಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಫೇಸ್‌ಬುಕ್ ಪೋಸ್ಟ್ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. 'ಬೆಂಗಳೂರು ಉದ್ಯೋಗ ಮೇಳ'ವನ್ನು ನೆಕ್ಸ್ ಪ್ಲೇಸ್ ಇನ್ಫೋ ಪ್ರೈ.ಲಿ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ ಎಂದು ಹಳಿದ್ದಾರೆ.

ಬೆಂಗಳೂರಿನಲ್ಲಿ ಫೆಬ್ರವರಿ 5 ರಂದು ಉದ್ಯೋಗ ಮೇಳ ಬೆಂಗಳೂರಿನಲ್ಲಿ ಫೆಬ್ರವರಿ 5 ರಂದು ಉದ್ಯೋಗ ಮೇಳ

ವಿವಿಧ ಖಾಸಗಿ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಯುವಕ/ ಯುವತಿಯರು ಉದ್ಯೋಗವನ್ನು ಪಡೆಯಲು ಇದೊಂದು ಸುವರ್ಣಾವಕಾಶವಾಗಿದೆ.

ಬೆಂಗಳೂರು ಡಿಸಿಸಿ ಬ್ಯಾಂಕ್ ನೇಮಕಾತಿ; ಫೆ. 28ರ ತನಕ ಅರ್ಜಿ ಹಾಕಿ ಬೆಂಗಳೂರು ಡಿಸಿಸಿ ಬ್ಯಾಂಕ್ ನೇಮಕಾತಿ; ಫೆ. 28ರ ತನಕ ಅರ್ಜಿ ಹಾಕಿ

Job Fair In JP Nagar Bengaluru On February 4th

ಈ ಉದ್ಯೋಗ ಮೇಳದಲ್ಲಿ ಆಸ್ಪತ್ರೆ, ವಾಣಿಜ್ಯ, ಶಿಕ್ಷಣ, ಬಿಪಿಒ, ರಿಯಲ್ ಎಸ್ಟೇಟ್, ಆಟೋ ಮೊಬೈಲ್, ಐಟಿ, ಸೇಲ್ಸ್‌ ವಿಭಾಗದ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

PSI Recruitment Re Exam : ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ, ಪ್ರವೀಣ್‌ ಸೂದ್ ಟ್ವೀಟ್PSI Recruitment Re Exam : ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ, ಪ್ರವೀಣ್‌ ಸೂದ್ ಟ್ವೀಟ್

ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಬಿಎ, ಬಿಕಾಂ, ಬಿಎಸ್‌ಸಿ, ಬಿಬಿಎ, ಎಂಬಿಎ, ಎಂಸಿಎ, ಡಿಪ್ಲೊಮಾ, ಐಟಿಐ ಮತ್ತು ಎಲ್ಲಾ ಕಂಪ್ಯೂಟರ್ ಕೋರ್ಸ್‌ ಮಾಡಿರುವ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.

ವಿಳಾಸ; ಶನಿವಾರ ಬೆಳಗ್ಗೆ 9.30 ರಿಂದ ಸಂಜೆ 6.30ರ ತನಕ ಉದ್ಯೋಗ ಮೇಳ ದಿ ಆಕ್ಸ್ಫರ್ಡ್ ಶಿಕ್ಷಣ ಸಂಸ್ಥೆ, ಸಿಎ ಸೈಟ್ #40, ಜೆಪಿ ನಗರ 1ನೇ ಹಂತ ಇಲ್ಲಿ ನಡೆಯಲಿದೆ.

ಹೆಚ್ಚಿನ ವಿವರಗಳಿಗೆ 9743 66 6666, 9241669999 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕ ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ ಮತ್ತು ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ 45 ದಿನಗಳ ತರಬೇತಿ ಆಯೋಜಿಸಲಾಗಿದೆ.

ಆಸಕ್ತರು ಫೆಬ್ರವರಿ 8ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 0821-2515944 ಅನ್ನು ಸಂಪರ್ಕಿಸಬಹುದು.

English summary
Job fair in Oxford educational institutions J. P. Nagar, Bengaluru on February 4th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X