ದಾವಣಗೆರೆ, ಕಲಬುರಗಿಯಲ್ಲಿ ಉದ್ಯೋಗ ಮೇಳ

ಬೆಂಗಳೂರು, ಮಾರ್ಚ್ 09: ದಾವಣಗೆರೆಯಲ್ಲಿ ಮಾರ್ಚ್ 11ರಂದು ಮತ್ತು ಕಲಬುರಗಿ ಜಿಲ್ಲೆಯಲ್ಲಿ ಮಾರ್ಚ್ 10ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಮಾದರಿ ವೃತ್ತಿ ಕೇಂದ್ರದ ಯೋಜನೆ ಅಡಿಯಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮಾರ್ಚ್ 11ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿವೆ. ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ/ ಬಿಬಿಎಂ, ಬಿಸಿಎ ಹಾಗೂ ಸ್ನಾತಕೋತ್ತರ ಪದವಿ ಹೊಂದಿದ ಅಭ್ಯರ್ಥಿಗಳ ನೇಮಕಾತಿ ನಡೆಯುತ್ತಿದೆ.

Job Fair

ಆಸಕ್ತ ಅಭ್ಯರ್ಥಿಗಳು ಮಾರ್ಚ್ 11ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಕನಿಷ್ಠ 5 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 08192 259446, 9916661900, 7406323294 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಕಲಬುರಗಿಯಲ್ಲಿ ಉದ್ಯೋಗ ಮೇಳ; ರಾಷ್ಟ್ರೀಯ ವೃತ್ತಿ ಸೇವೆ ಯೋಜನೆಯ, ಮಾದರಿ ವೃತ್ತಿ ಕೇಂದ್ರದ ಅಡಿ ಹಾಗೂ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಮಾರ್ಚ್ 10 ರಂದು ಕಲಬುರಗಿಯಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದರಿ ಉದ್ಯೋಗ ಮೇಳದಲ್ಲಿ ರಾಜ್ಯದ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ಎಸ್. ಎಸ್. ಎಲ್. ಸಿ., ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪದವೀಧರರು ಅಭ್ಯರ್ಥಿಗಳು ಈ ಉದ್ಯೋಗ ಮೇಳದದಲ್ಲಿ ಭಾಗವಹಿಸಿ ಸದುಪಯೋಗವನ್ನು ಪಡೆದುಕೊಳ್ಳಬೇಕು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡುವುದಿಲ್ಲ ಹಾಗೂ ಪ್ರವೇಶ ಸಂಪೂರ್ಣವಾಗಿ ಉಚಿತವಾಗಿರುತ್ತದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ 08472-274846.

ಕೊಪ್ಪಳದಲ್ಲಿ ಉದ್ಯೋಗ ಮೇಳ; ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಕೊಪ್ಪಳ, ಸಂಜೀವಿನಿ ಎನ್‌ಆರ್‌ಎಲ್‌ಎಂ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಜಂಟಿಯಾಗಿ ಮಾರ್ಚ್ 21ರಂದು ಉದ್ಯೋಗ ಮೇಳ ಆಯೋಜಿಸಿವೆ.

ಕೊಪ್ಪಳ ನಗರದ ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ತನಕ ನಡೆಯಲಿರುವ ಉದ್ಯೋಗ ಮೇಳದಲ್ಲಿ ಕೈಗಾರಿಕೆ, ಕೃಷಿ, ಸಾರಿಗೆ, ಫಾರ್ಮಾ, ಬ್ಯಾಕಿಂಗ್, ಫೈನಾನ್ಸಿಯಲ್‌ಗೆ ಸಂಬಂಧಿಸಿದ ಸುಮಾರು 50 ಕಂಪನಿಗಳು ಭಾಗವಹಿಸಲಿವೆ.

ಈ ಉದ್ಯೋಗ ಮೇಳದಲ್ಲಿ ಎಸ್. ಎಸ್. ಎಲ್. ಸಿ ವಿದ್ಯಾರ್ಹತೆಯಿಂದ ಪದವಿ ವಿದ್ಯಾರ್ಹತೆವರೆಗಿನ ಉದ್ಯೋಕಾಂಕ್ಷಿಗಳು ಭಾಗವಹಿಸಬಹುದಾಗಿದೆ. ಉದ್ಯೋಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಗೂಗಲ್ ಫಾರಂ https://forms.gle/m11qzC9PZ6JsDPfs5 ನಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ಈ ಕಛೇರಿಗೆ ಭೇಟಿ ನೀಡಬಹುದು ಅಥವಾ ಮೊಬೈಲ್ ಸಂಖ್ಯೆ 7618731311, 9972778248, 9743839859ಗೆ ಸಂಪರ್ಕಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+