ಕಲಬುರಗಿಯಲ್ಲಿ ಫೆ. 24ರ ಶುಕ್ರವಾರ ಉದ್ಯೋಗ ಮೇಳ
ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಫೆಬ್ರವರಿ 24ರ ಶುಕ್ರವಾರ ಬೆಳಗ್ಗೆ 10.30ರಿಂದ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕಲಬುರಗಿ, ಫೆಬ್ರವರಿ 23; ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ. ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಫೆಬ್ರವರಿ 24ರ ಶುಕ್ರವಾರ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪಾಳ್ಗೊಳ್ಳಲು ಅಭ್ಯರ್ಥಿಗಳಿಗೆ 18 ರಿಂದ 25 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ. ನೇರ ಸಂದರ್ಶನದ ಮೂಲಕ ವಿವಿಧ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಮೇಳದ ಉಪಯೋಗ ಪಡೆದುಕೊಳ್ಳಬಹುದಾಗಿದೆ.
ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಫೆಬ್ರವರಿ 24ರ ಶುಕ್ರವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ನೇರ ಸಂದರ್ಶನದ ಮೂಲಕ ವಿವಿಧ ಹುದ್ದೆ ಭರ್ತಿ ಮಾಡಲಾಗುತ್ತದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಹೇಳಿದ್ದಾರೆ.

ಜೋಯಾಲುಕ್ಕಾಸ್ ಜುವೆಲರಿಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್/ ಸೆಲ್ಸ್ ಟ್ರೇನಿ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಮಕಾತಿ ಬಯಸುವ ಅಭ್ಯರ್ಥಿಗಳು ಡಿಪ್ಲೋಮಾ/ ಯಾವುದೇ ಪದವಿ ಪಾಸಾಗಿರಬೇಕು. ಅಭ್ಯರ್ಥಿಗಳ ವಯೋಮಿತಿ 18 ರಿಂದ 25 ವರ್ಷದೊಳಗಿರಬೇಕು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಆಸಕ್ತರು ನೇರವಾಗಿ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಉದ್ಯೋಗ ಮೇಳಕ್ಕೆ ಆಗಮಿಸುವ ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್, ಆಧಾರ್ ಕಾರ್ಡ್ ಹಾಗೂ ಪಾಸ್‍ಪೋರ್ಟ್ ಸೈಜಿನ ಎರಡು ಭಾವಚಿತ್ರಗಳೊಂದಿಗೆ ಶುಕ್ರವಾರ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.
ನೇದ ಸಂದರ್ಶನಕ್ಕೆ ಆಗಮಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಅಲ್ಲದೇ ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ ಎಂದು ಸಷ್ಟಪಡಿಸಲಾಗಿದೆ.
ಉದ್ಯೋಗ ಮೇಳ, ನೇರ ಸಂದರ್ಶನದ ಕುರಿತ ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಆಸಕ್ತರು ಕಚೇರಿಯ ದೂರವಾಣಿ ಸಂಖ್ಯೆ 08472-274846 ಗೆ ಕರೆ ಮಾಡಿ ಸಹ ಮಾಹಿತಿ ಪಡೆಯಬಹುದಾಗಿದೆ.
ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂದರ್ಶನ; ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಇದಕ್ಕಾಗಿ ಮಾರ್ಚ್ 1ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.
ಪಶು ವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ ಪಶು ವೈದ್ಯಕೀಯ ರೋಗಶಾಸ್ತ್ರ, ಹಾಗೂ ಪಶು ವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ. 56,700 ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000 ವೇತನ ನೀಡಲಾಗುತ್ತದೆ.
ಸಂದರ್ಶನ ಮಾರ್ಚ್ 1ರ ಬೆಳಗ್ಗೆ 11 ಗಂಟೆಯಿಂದ ಡೀನ್ ಕಚೇರಿ, ಪಶು ವೈದ್ಯಕೀಯ ಮಹಾವಿದ್ಯಾಲಯ ಶಿವಮೊಗ್ಗ ಇಲ್ಲಿ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 08182-200872 ಹಾಗೂ ವಿಶ್ವವಿದ್ಯಾಲಯದ ಜಾಲತಾಣ www.kvafsu.edu.inಗೆ ಭೇಟಿ ನೀಡಬಹುದಾಗಿದೆ ಎಂದು ಪಶು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ತಿಳಿಸಿದ್ದಾರೆ.












Click it and Unblock the Notifications