• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿಯಲ್ಲಿ ಜುಲೈ 16 ರಂದು ಉದ್ಯೋಗ ಮೇಳ

|
Google Oneindia Kannada News

ಕಲಬುರಗಿ, ಜುಲೈ 11; ವಿಶ್ವ ಕೌಶಲ್ಯ ದಿನದ ಅಂಗವಾಗಿ ಜುಲೈ 16 ರಂದು ಕಲಬುರಗಿಯಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಅವಶ್ಯಕ ದಾಖಲಾತಿಗಳೊಂದಿಗೆ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು.

ಹೊಸಕೋಟೆ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ ಹೊಸಕೋಟೆ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಉದ್ಯೋಗ ಮೇಳದಲ್ಲಿ ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪದವೀಧರ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಶೈಕ್ಷಣಿಕ ಅರ್ಹತೆಯ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, 371(ಜೆ) ಪ್ರಮಾಣ ಪತ್ರ ಹಾಗೂ 2 ಪಾಸ್‍ಪೋರ್ಟ್ ಸೈಜ್ ಭಾವಚಿತ್ರದೊಂದಿಗೆ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳಬಹುದು.

ಭಾರತದಲ್ಲಿ ಹೆಚ್ಚುತ್ತಿದೆ ನೇಮಕಾತಿ: ಸಮೀಕ್ಷೆ ವರದಿ ಭಾರತದಲ್ಲಿ ಹೆಚ್ಚುತ್ತಿದೆ ನೇಮಕಾತಿ: ಸಮೀಕ್ಷೆ ವರದಿ

ಕಾರ್ಯಾಗಾರ ನಡೆಯಲಿದೆ; ಜುಲೈ 12 ರಂದು ಕೆಎಎಸ್ ಮತ್ತು ಕೆಪಿಎಸ್‌ಸಿ ಪರೀಕ್ಷಾರ್ಥಿಗಳಿಗೆ, ಜುಲೈ 13ರಂದು ಐಟಿಐ ಹಾಗು ಡಿಪ್ಲೊಮಾ ಅಭ್ಯರ್ಥಿಗಳಿಗೆ ಉನ್ನತ ಶಿಕ್ಷಣ ಮತ್ತು ಉದ್ಯೋಗದ ಕುರಿತು ಹಾಗೂ ಇದೇ ಜುಲೈ 14 ರಂದು ಇಚ್ಛೆಯುಳ್ಳ ಅಭ್ಯರ್ಥಿಗಳಿಗೆ ಪರ್ಸನಾಲಿಟಿ ಡೆವಲಪ್‍ಮೆಂಟ್ ಹಾಗೂ ಸಾಫ್ಟ್ ಸ್ಕೀಲ್ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಪ್ರತಿದಿನ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಕಾರ್ಯಾಗಾರ ಸಹ ಆಯೋಜಿಸಲಾಗಿದೆ.

 ಅಗ್ನಿಪಥ ನೇಮಕಾತಿ: ಭಾರತೀಯ ವಾಯುಸೇನೆ ಸೇರಲು 10 ಸಾವಿರ ಮಹಿಳೆಯರು ನೋಂದಣಿ ಅಗ್ನಿಪಥ ನೇಮಕಾತಿ: ಭಾರತೀಯ ವಾಯುಸೇನೆ ಸೇರಲು 10 ಸಾವಿರ ಮಹಿಳೆಯರು ನೋಂದಣಿ

ಆಸಕ್ತ ಅಭ್ಯರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08472-274846 ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ; ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ವಾಗಟ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಗೌರವ ಸಂಭಾವನೆ ಆಧಾರಿತ ತಾತ್ಕಾಲಿಕ ಮೇಲ್ವಿಚಾರಕರ ಹುದ್ದೆ ಖಾಲಿ ಇದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಕನಿಷ್ಠ ಎಸ್‌ಎಸ್ಎಲ್‌ಸಿ ವಿದ್ಯಾರ್ಹತೆ ಹೊಂದಿರುವ ಹೊಸಕೋಟೆ ತಾಲ್ಲೂಕಿನ ವಾಗಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಸಾಮಾನ್ಯ ಮಹಿಳಾ ಅಭ್ಯರ್ಥಿಗಳು 2022ರ ಆಗಸ್ಟ್ 6ರೊಳಗೆ ಅರ್ಜಿ ಸಲ್ಲಿಸಬೇಕು.

ಆಸಕ್ತ ಅಭ್ಯರ್ಥಿಗಳು ವಾಗಟ ಗ್ರಾಮ ಪಂಚಾಯಿತಿ ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ವಾಗಟ ಗ್ರಾಮ ಪಂಚಾಯಿತಿ ಕಚೇರಿಗೆ ಸಲ್ಲಿಸಲು 2022ರ ಆಗಸ್ಟ್ 6 ಕೊನೆಯ ದಿನವಾಗಿದೆ.

ನಿಬಂಧನೆ/ ಷರತ್ತು ಮತ್ತು ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಗ್ರಾಮಾಂತರ ಜಿಲ್ಲಾ ಕೇಂದ್ರ ಗ್ರಂಥಾಲಯ, 714, ನೆಲ ಮಹಡಿ, 5ನೇ ಮುಖ್ಯ ರಸ್ತೆ, 10ನೇ ಕ್ರಾಸ್, ಎಂ.ಸಿ. ಲೇಔಟ್, ವಿಜಯನಗರ, ಬೆಂಗಳೂರು-560040 ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-23352460.

English summary
Kalaburagi district employment exchange office organized job fair on July 18th. Candidates can attend job fair with related documents.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X