ಕಲಬುರಗಿಯಲ್ಲಿ ಆಗಸ್ಟ್ 25ರಂದು ಉದ್ಯೋಗ ಮೇಳ
ಕಲಬುರಗಿ, ಆಗಸ್ಟ್ 23; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಗಸ್ಟ್ 25 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು.
ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಉದ್ಯೋಗ ಮೇಳದಲ್ಲಿ ಹಲವು ಕಂಪನಿಗಳು ಭಾಗವಹಿಸಲಿವೆ. ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಯಾವ-ಯಾವ ಹುದ್ದೆಗಳು; ಕಲಬುರಗಿ ಫ್ಲೀಪ್‍ಕಾರ್ಟ್‍ನಲ್ಲಿ ಡೆಲಿವರಿ ಎಕ್ಸಿಕ್ಯೂಟಿವ್ 30 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಎಸ್ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 20 ರಿಂದ 45 ವರ್ಷಗಳು. ಪುರುಷ ಅಭ್ಯರ್ಥಿಗಳು ಡ್ರೈವಿಂಗ್ ಲೈಸನ್ಸ್ ಮತ್ತು ಬೈಕ್ ಹೊಂದಿರಬೇಕು.
ಕಲಬುರಗಿಯ ಭಾರತ ಫೈನಾನ್ಸಿಯಲ್ ಇನ್‍ಕ್ಲೂಜನ್ ಪ್ರೈ.ಲಿ. ಫೀಲ್ಡ್ ಅಸಿಸ್ಟಂಟ್ 30 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪಾಸಾಗಿರಬೇಕು.
ಲೋನ್ ಆಫೀಸರ್ 20 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವಿದ್ಯಾರ್ಹತೆ ಪಿಯುಸಿ ಹಾಗೂ ಪದವಿ.
ಭಾರತ ಮನಿ ಆಫೀಸರ್ 10 ಹುದ್ದೆಗಳಿಗೆ ಎಸ್ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. 21 ರಿಂದ 28 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಮಾತ್ರ ಪಾಲ್ಗೊಳ್ಳಬಹುದಾಗಿದೆ.
ಕಲಬುರಗಿ ಎಸ್‌ಬಿಐ ಲೈಫ್ ಇನ್ಸೂರೆನ್ಸ್‌ನಲ್ಲಿ ಸೇಲ್ಸ್ ಆಫೀಸರ್ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 25 ರಿಂದ 40 ವರ್ಷದ ವಯೋಮಿತಿಯ ಅಭ್ಯರ್ಥಿಗಳು ಭಾಗವಹಿಸಬಹುದು.

ಬಿಸಿನೆಸ್ ಪಾರ್ಟನರ್/ ಲೈಫ್ ಮಿತ್ರ ಹುದ್ದೆಗೆ ಎಸ್ಎಸ್ಎಲ್‌ಸಿ, ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳಗೆ ವಯೋಮಿತಿ 30 ರಿಂದ 60 ವರ್ಷಗಳು.
ಟೆಲಿಕಾಲರ್ ಹುದ್ದೆಗೆ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಮಹಿಳಾ ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 35 ವರ್ಷಗಳು.
ಯುನಿಟ್ ಮ್ಯಾನೇಜರ್ ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ, 25 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಕಲಬುರಗಿಯ ಹಿಂದೂಸ್ಥಾನ ಮೈಕ್ರೋ ಫೈನಾನ್ಸ್ ಕಸ್ಟಮರ್ ಸರ್ವೀಸ್ ಪ್ರೋವೈಡರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಅಭ್ಯರ್ಥಿಗಳು ಎಸ್ಎಸ್ಎಲ್‌ಸಿ, ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 28 ವರ್ಷ.
ಕ್ರೆಡಿಟ್ ಆಫೀಸರ್ ಹುದ್ದೆಗೆ ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ವಯೋಮಿತಿ 18 ರಿಂದ 32 ವರ್ಷಗಳು.
ಬ್ರ್ಯಾಂಚ್ ಮ್ಯಾನೇಜರ್ ಹುದ್ದೆಗಳಿಗೆ ಯಾವುದೇ ಪದವಿ ಪಾಸಾಗಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ವಯೋಮಿತಿ 18 ರಿಂದ 36 ವರ್ಷಗಳು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯೂಮ್, ವಿದ್ಯಾರ್ಹತೆಯ ಪ್ರಮಾಣಪತ್ರ ಹಾಗೂ ಆಧಾರ್ ಕಾರ್ಡ್‍ದೊಂದಿಗೆ ಸದರಿ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಮಯ ಕಚೇರಿಯನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 08472-274846.
ಪರೀಕ್ಷಾ ತರಬೇತಿಗೆ ನೋಂದಣಿ ಮಾಡಿ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಐ. ಬಿ. ಪಿ. ಎಸ್ ರಾಷ್ಟ್ರೀಕೃತ ಬ್ಯಾಂಕ್‌ನವರು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಿದ್ದಾರೆ.
ತರಬೇತಿ ಪಡೆಯಲು ಆಸಕ್ತಿ ಇರುವ ಅಭ್ಯರ್ಥಿಗಳು ಆಗಸ್ಟ್ 29ರೊಳಗಾಗಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಕರಾಮುವಿ ಪ್ರಭಾರ ಕುಲಸಚಿವರಾದ ಡಾ. ಎ. ಖಾದರ್ ಪಾಷ ತಿಳಿಸಿದ್ದಾರೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944ಗೆ ಸಂಪರ್ಕಿಸಬಹುದು.












Click it and Unblock the Notifications