ಕಲಬುರಗಿಯಲ್ಲಿ ಫೆಬ್ರವರಿ 24ರಂದು ಉದ್ಯೋಗ ಮೇಳ

ಕಲಬುರಗಿ, ಫೆಬ್ರವರಿ 18; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಫೆಬ್ರವರಿ 24ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ನಿರುದ್ಯೋಗಿ ಯುವಕ/ಯುವತಿಯರು ಮೇಳದ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

ರಾಷ್ಟ್ರೀಯ ವೃತ್ತಿ ಸೇವೆ ಯೋಜನೆ ಹಾಗೂ ಮಾದರಿ ವೃತ್ತಿ ಕೇಂದ್ರದ ಅಡಿಯಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಉದ್ಯೋಗ ಮೇಳದಲ್ಲಿ ರಾಜ್ಯದ 10ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ.

"ಫೆಬ್ರವರಿ 24 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ" ಎಂದು ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Job Fair In Kalaburagi On February 24

ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಬಿ.ಫಾರ್ಮಾ, ಎಂ.ಹೆಚ್.ಎ. ಇಂಜಿನಿಯರಿಂಗ್ (ಸಿವಿಲ್ ಬ್ರ್ಯಾಂಚ್ ಹೊರತುಪಡಿಸಿ) ಹಾಗೂ ಪದವೀಧರ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಪಡೆಯಲು ದೂರವಾಣಿ ಸಂಖ್ಯೆ 08472-274846 ಗೆ ಕರೆ ಮಾಡಬಹುದಾಗಿದೆ.

ಉದ್ಯೋಗ ಮೇಳ ನಡೆಯುವ ವಿಳಾಸ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕಲಬುರಗಿ, ಎಂ. ಎಸ್. ಕೆ. ಮಿಲ್ ರಸ್ತೆ, ಸರ್ಕಾರಿ ಐ.ಟಿ.ಐ. ಕಾಲೇಜು ಹಿಂಭಾಗ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+