ಕಲಬುರಗಿಯಲ್ಲಿ ಜನವರಿ 7ರಂದು ಉದ್ಯೋಗ ಮೇಳ
ಕಲಬುರಗಿ, ಜನವರಿ 05; ಕಲಬುರಗಿಯಲ್ಲಿ ಜನವರಿ 7ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ವಯೋಮಿತಿ 18 ರಿಂದ 30 ವರ್ಷಗಳು.
ಜನವರಿ 7ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಆಸಕ್ತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಮನವಿ ಮಾಡಿದ್ದಾರೆ.
ನೇರ ಸಂದರ್ಶನದ ಮೂಲಕ ಕಲಬುರಗಿ ತನಿಷ್ಕಾ ಜ್ಯುವೆಲರಿಯಲ್ಲಿ ಖಾಲಿ ಇರುವ ಸ್ಟೋರ್ ಮ್ಯಾನೇಜರ್ ಹಾಗೂ ರಿಟೈಲ್ ಸೇಲ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ, 18 ರಿಂದ 30 ವರ್ಷದೊಳಗಿನವರು ಪಾಲ್ಗೊಳ್ಳಬಹುದು. ಕಾರಿಗಾರ ಹುದ್ದೆಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 20 ರಿಂದ 32 ವರ್ಷಗಳು.

ಕೃಷಿ ಬಂಧುವಿನಲ್ಲಿ ಬಿಜಿನೆಸ್ ಡೆವಲಪ್‍ಮೆಂಟ್ ಆಫೀಸರ್, ಸೇಲ್ಸ್ ಆಂಡ್ ಮಾರ್ಕೆಟಿಂಗ್, ವೆಬ್‍ಸೈಟ್ ಡಿಸೈನರ್, ಆಂಡ್ರಾಯ್ಡ್ ಮೊಬೈಲ್ ಅಪ್ಲಿಕೇಶನ್ ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷಗಳು.
ರಿಲಯನ್ಸ್ ಜಿಯೋದಲ್ಲಿ ಎಂಟರ್‍ಪ್ರೈಸೆಸ್ ಸೇಲ್ಸ್ ಆಫೀಸರ್ ಹುದ್ದೆಗೆ ನೇಮಕಾತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷಗಳು.
ಉನ್ನತಿ ಫೌಂಡೇಶನ್‍ದಲ್ಲಿ 30 ದಿನಗಳ ಟ್ರೇನಿಂಗ್ ಪಡೆಯಲು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ, ವಯೋಮಿತಿ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಜೆರಾಕ್ಸ್, ರೆಸ್ಯೂಮ್, ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್, ದಾಖಲಾತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ನೇರ ಸಂದರ್ಶನಕ್ಕೆ ಆಗಮಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 08472-274846.
ಉದ್ಯೋಗ ಮೇಳ ನಡೆಯುವ ಸ್ಥಳ; ಕಲಬುರಗಿ ಸರ್ಕಾರಿ ಐಟಿಐ ಕಾಲೇಜಿನ ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ.












Click it and Unblock the Notifications