ಕಲಬುರಗಿ; ಜುಲೈ 29ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
ಕಲಬುರಗಿ, ಜುಲೈ 28; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವಿವಿಧ ಕಂಪನಿಗಳಲ್ಲಿನ ವಿವಿಧ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 40ರ ವಯೋಮಿತಿಯವರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಜುಲೈ 29ರ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯ ತನಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆಯನ್ನು ನೀಡುವುದಿಲ್ಲ.
ಕಲಬುರಗಿಯ ಕರುಣಾ ಟೊಯೋಟಾದಲ್ಲಿ ಸ್ವಾಗತಕಾರ, ಶೋ ರೂಂ ಸೆಲ್ಸ್ ಎಕ್ಸಿಕ್ಯೂಟಿವ್, ಇನ್ಸುರೆನ್ಸ್ ಎಕ್ಸಿಕ್ಯೂಟಿವ್ ಹಾಗೂ ಸೇಲ್ಸ್ ಟ್ರೇನರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಪಿಯುಸಿ, ಮತ್ತು ಪದವಿ ವ್ಯಾಸಂಗ ಮಾಡಿರಬೇಕು. ಆಟೋಮೊಬೈಲ್ ಡಿಪ್ಲೊಮಾ ಪದವಿ ಪಡೆದವರು ಸಂದರ್ಶನಕ್ಕೆ ಹಾಜರಾಗಬಹುದು. ವಯೋಮಿತಿ 18 ರಿಂದ 45 ವರ್ಷ.

ಸೆಲ್ಸ್ ಆಫೀಸರ್, ಟೀಮ್ ಲಿಡರ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಡಿಪ್ಲೊಮಾ ಆಟೋಮೊಬೈಲ್, ಪಿಯುಸಿ ಹಾಗೂ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 40 ವರ್ಷಗಳು.
ಭಾರತ್ ಫೈನಾನ್ಶಿಯಲ್ ಪೈವೇಟ್ ಲಿ. ಮನಿ ಆಫೀಸರ್, ಲೋನ್ ಆಫೀಸರ್ ಹಾಗೂ ಫೀಲ್ಡ್ ಅಸಿಸ್ಟಂಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. 10ನೇ ತರಗತಿ, ಪಿಯುಸಿ ಹಾಗೂ ಪದವಿ ಪಾಸಾದ 18 ರಿಂದ 28 ವರ್ಷದ ವಯೋಮಿತಿ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಬೆಂಗಳೂರಿನ ನಿಡ್ಸ್ ಮ್ಯಾನ್ಪವರ್ ಎಜೆನ್ಸಿಯಲ್ಲಿ ಆಪರೇಟರ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷ. ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಬಯೋಡಾಟಾ ಹಾಗೂ ಆಧಾರ್ ಕಾರ್ಡ್ ಸೇರಿದಂತೆ ಅವಶ್ಯಕ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08472-274846.
ಸಂದರ್ಶನಕ್ಕೆ ಆಗಮಿಸುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ಸಂದರ್ಶನ ನಡೆಯುವ ವಿಳಾಸ; ಕಲಬುರಗಿ ನಗರದ ಜೇವರ್ಗಿ ಕ್ರಾಸ್ ಸಮೀಪದಲ್ಲಿರುವ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ












Click it and Unblock the Notifications