ಕಲಬುರಗಿ; ಅಕ್ಟೋಬರ್ 13ರಂದು ಉದ್ಯೋಗ ಮೇಳ

ಕಲಬುರಗಿ, ಅಕ್ಟೋಬರ್ 11; ಕಲಬುರಗಿಯಲ್ಲಿ ಅಕ್ಟೋಬರ್ 13ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 18 ರಿಂದ 30 ವರ್ಷದೊಳಗಿನ ವಯೋಮಿತಿ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ರಾಷ್ಟ್ರೀಯ ವೃತ್ತಿ ಸೇವೆ ಯೋಜನೆಯಡಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವ ಪಿಯು ಮತ್ತು ಪದವಿ ಕಾಲೇಜು ಕಲಬುರಗಿ ಇವುಗಳ ಸಹಯೋಗದೊಂದಿಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ.

ಕಲಬುರಗಿ ಹೊಸ ಜೇವರ್ಗಿ ರಸ್ತೆಯ ಗೋದುತಾಯಿ ಕಾಲೋನಿಯ ಶಿವ ಪಿಯು ಮತ್ತು ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ. ಆಸಕ್ತರು ಉದ್ಯೋಗ ಮೇಳದಲ್ಲಿ ಪಾಳ್ಗೊಳ್ಳಬಹುದಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Job Fair In Kalaburagi On October 13th

ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಬಿಇ, ಎಂಬಿಎ, ಎಂಕಾಂ, ಎಂಎಸ್ಸಿ, ಎಂಸಿಎ ಹಾಗೂ ಎಂಟೆಕ್ ಪಾಸಾದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಕರೆ ಮಾಡಬಹುದಾಗಿದೆ.

ಅಗ್ನಿವೀರ್ ಸಾಮಾನ್ಯ ಪ್ರವೇಶ ಪರೀಕ್ಷೆ; ಅಗ್ನಿ ವೀರ್ ನೇಮಕಾತಿ ಸಾಮಾನ್ಯ ಪ್ರವೇಶ ಪರೀಕ್ಷೆ (CEE) ಅಕ್ಟೋಬರ್ 16ರಂದು ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ನಡೆಯಲಿದೆ. ಸುಮಾರು 1900 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ದಕ್ಷಿಣ ವಿಭಾಗದ ಉಪವಿಭಾಗಾಧಿಕಾರಿ ಕೆ. ಎನ್. ರಘು ನಂದನ್ ಹೇಳಿದರು.

ಬೆಳಗ್ಗೆ 4 ಗಂಟೆಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾರ್ಥಿಗಳು ಅಕ್ಟೋಬರ್ 15 ರಂದೇ ಸೂಚಿಸಿದ ಸ್ಥಳದಲ್ಲಿ ವಾಸ್ತವ್ಯ ಹೂಡಬೇಕು. ಸುತ್ತ ಮುತ್ತಲಿನ ಶಾಲೆಗಳಲ್ಲಿ ಇದಕ್ಕಾಗಿ ವ್ಯವಸ್ಥೆ ಮಾಡಲಾಗುತ್ತದೆ.

ಪರೀಕ್ಷೆಯನ್ನು ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು ಸುಮಾರು 1900 ಪರೀಕ್ಷಾರ್ಥಿಗಳು ಭಾಗವಹಿಸಲಿದ್ದಾರೆ. ಅವರಿಗೆ ಸುಮಾರು 2000 ಆಸನಗಳ ವ್ಯವಸ್ಥೆ ಮಾಡಬೇಕು ಎಂದು ನೇಮಕಾತಿ ನಿರ್ದೇಶಕರಾದ ಗೌರವ್ ಥಾಪ ಉಪವಿಭಾಗಾಧಿಕಾರಿಗಳಿಗೆ ಮನವಿ ಮಾಡಿದರು.

10 ಮೊಬೈಲ್ ಟಾಯ್ಲೆಟ್, 15 ಕೆ.ವಿ ಜನರೇಟರ್, 1 ಆಂಬುಲೆನ್ಸ್ ಜೊತೆಗೆ ವೈದ್ಯರು ಹಾಗೂ ಸಿಬ್ಬಂದಿಯನ್ನು ಆಯೋಜನೆ ಮಾಡಲಾಗುತ್ತದೆ. ಪರೀಕ್ಷೆಯ ಹಿಂದಿನ ದಿನದಂದು ತಂಗುವ ವಿದ್ಯಾರ್ಥಿಗಳಿಗೆ ನೀರಿನ ವ್ಯವಸ್ಥೆ ಹಾಗೂ ಪರೀಕ್ಷಾರ್ಥಿಗಳಿಗೆ ಬೆಳಿಗ್ಗೆ 8 ಗಂಟೆಗೆ ಉಪಹಾರ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+