ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿ; ಅಕ್ಟೋಬರ್ 21 ರಂದು ಉದ್ಯೋಗ ಮೇಳ

|
Google Oneindia Kannada News

ಕಲಬುರಗಿ, ಅಕ್ಟೋಬರ್ 17; ಕಲಬುರಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಬೆಂಗಳೂರಿನ ವಿಂದ್ಯಾ ಇ-ಇನ್ಪೋಮೀಡಿಯಾ ಪೈವೇಟ್ ಲಿಮಿಟೆಡ್ ಇವುಗಳ ಸಹಯೋಗದೊಂದಿಗೆ ಅಕ್ಟೋಬರ್ 21ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹುದ್ದೆಗೆ ವಿಕಲಚೇತನರಿಗಾಗಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಕೌಶಲ್ಯ ಮಿಷನ್‍ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ನೇಮಕಾತಿ; ಸಿಹಿಸುದ್ದಿ ಕೊಟ್ಟ ಸರ್ಕಾರಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ನೇಮಕಾತಿ; ಸಿಹಿಸುದ್ದಿ ಕೊಟ್ಟ ಸರ್ಕಾರ

ಕಲಬುರಗಿ ಜಿಲ್ಲೆಯಲ್ಲಿನ ವಿಕಚೇತನರಿಗಾಗಿ ಚಲನವಲನ ನೂನ್ಯತೆ ಹಾಗೂ ಪ್ರತಿಶತ 40-50 ಮಂದದೃಷ್ಟಿ ಹೊಂದಿದ ಅಭ್ಯರ್ಥಿಗಳು ಮಾತ್ರ ಈ ಉದ್ಯೋಗ ಮೇಳಕ್ಕೆ ಹಾಜರಾಗಬೇಕು. ಬೆಂಗಳೂರು ಮತ್ತು ಕೃಷ್ಣಗಿರಿ ಸ್ಥಳದಲ್ಲಿರುವ ಕಸ್ಟಮರ್ ಸಪೋರ್ಟ್‌ ಎಕ್ಸಿಕ್ಯೂಟಿವ್ ಹುದ್ದೆಗೆ ಎಸ್.ಎಸ್.ಎಲ್.ಸಿ., ಪಿಯುಸಿ ಹಾಗೂ ಯಾವುದೇ ಪದವಿ ಪಾಸಾಗಿರಬೇಕು.

ಕೊಡಗು; 11 ಅತಿಥಿ ಶಿಕ್ಷಕರ ಹುದ್ದೆ, ಅಕ್ಟೋಬರ್ 30ರೊಳಗೆ ಅರ್ಜಿ ಹಾಕಿ ಕೊಡಗು; 11 ಅತಿಥಿ ಶಿಕ್ಷಕರ ಹುದ್ದೆ, ಅಕ್ಟೋಬರ್ 30ರೊಳಗೆ ಅರ್ಜಿ ಹಾಕಿ

Job Fair In Kalaburagi On October 21 For Physically Challenged Persons

ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 35 ವರ್ಷಗಳು. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಕನ್ನಡ, ಹಿಂದಿ, ಇಂಗ್ಲಿಷ್, ತೆಲಗು ಹಾಗೂ ಮರಾಠಿ ಭಾಷೆಗಳಲ್ಲಿ ಯಾವುದಾದರೂ ಎರಡು ಭಾಷೆಗಳಲ್ಲಿ ಭಾಷಾಜ್ಞಾನ ಹೊಂದಿರಬೇಕು.

ನಬಾರ್ಡ್ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ, ತಕ್ಷಣ ಅರ್ಜಿ ಹಾಕಿನಬಾರ್ಡ್ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ, ತಕ್ಷಣ ಅರ್ಜಿ ಹಾಕಿ

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್‍ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08472-225569, ಮೊಬೈಲ್ ಸಂಖ್ಯೆ 8317384664, 9538155569, 9945727378.

ತರಬೇತಿಗಾಗಿ ಅರ್ಜಿ ಆಹ್ವಾನ; ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ (ಕಿಟಸರ್ಡ್) ಸಂಸ್ಥೆಯಲ್ಲಿ ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಹತ್ತು ದಿನಗಳ ಕಾಲ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತರಬೇತಿಯನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್. ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.

ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಅಕ್ಟೋಬರ್ 19ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ 2021ರ ಅಕ್ಟೋಬರ್ 20 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 9886781239, 9900135705.

ಅತಿಥಿ ಶಿಕ್ಷಕರ ಹುದ್ದೆ ಖಾಲಿ ಇದೆ; ಕೊಡಗು ಜಿಲ್ಲೆಯಲ್ಲಿರುವ 11 ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಸಲು ಗೌರವಧನದ ಆಧಾರದ ಮೇಲೆ ಪ್ರತಿ ಶಾಲೆಗೆ ಒಬ್ಬರಂತೆ 11 ಜನ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ.

ಅಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಸಿಕ 7,500 ರೂ. ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳು ಕಡ್ಡಾಯವಾಗಿ ಇಂಗ್ಲೀಷ್ ಐಚ್ಛಿಕ ವಿಷಯದಲ್ಲಿ ಪದವಿ ಮತ್ತು ಬಿ.ಎಡ್ ಪೂರ್ಣಗೊಳಿಸಿರಬೇಕು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಆಯ್ಕೆ ಪಟ್ಟಿ ಮಂಡಿಸಿ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿ ಆಯ್ಕೆ ಮಾಡಲಾಗುವುದು.

ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ, ಜಿಲ್ಲಾ ಪಂಚಾಯತ್ ಕಟ್ಟಡ ಇಲ್ಲಿಗೆ ಸಲ್ಲಿಸಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08272-200500 ಅನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.

English summary
Job fair in Kalaburagi on October 21, 202 for the people who physically challenged. Candidates can attend job fair from 10 am to 4 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X