ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಡಗು; ಜೂನ್ 16ರಂದು ಉದ್ಯೋಗ ಮೇಳ

|
Google Oneindia Kannada News

ಮಡಿಕೇರಿ, ಜೂನ್ 12; ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜೂನ್ 16 ರಂದು ಉದ್ಯೋಗ ಮೇಳ ಆಯೋಜನೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿ, ಅಗತ್ಯ ದಾಖಲೆಗಳ ಜೊತೆ ಹಾಜರಾಗಬಹುದಾಗಿದೆ.

ಜೂನ್ 16ರ ಗುರುವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆ ತನಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ವಿಜಯನಗರ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ವಿಜಯನಗರ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ ಮೇಳದಲ್ಲಿ ಪ್ಯಾಲೇಸ್ ಟೊಯೋಟಾ ಮೈಸೂರು, ಆರೇಂಜ್ ಕೌಂಟಿ ರೆಸಾರ್ಟ್, ಸಿದ್ದಾಪುರ, ಮೆಡ್ ಪ್ಲಸ್ ಮಂಗಳೂರು, ಆಲ್ಫಾ ಟೆಕ್ನಾಲಜಿ, ಮಡಿಕೇರಿ, ರಾಣಿ ಮದ್ರಾಸ್, ಮೈಸೂರು, ಜಸ್ಟ್ ಡಯಲ್, ಬೆಂಗಳೂರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಬಳ್ಳಾರಿ; ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಬಳ್ಳಾರಿ; ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Fair In Kodagu District Employment Exchange Office On June 16

ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ ವಿವರಗಳ ಪ್ರತಿಗಳೊಂದಿಗೆ ಮೇಳಕ್ಕೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.

ಏರ್‌ಪೋರ್ಟ್ ಪ್ರಾಧಿಕಾರದಲ್ಲಿ 400 ಹುದ್ದೆಗೆ ನೇಮಕಾತಿ, ಬಿಎಸ್ಸಿ ಓದಿರಬೇಕುಏರ್‌ಪೋರ್ಟ್ ಪ್ರಾಧಿಕಾರದಲ್ಲಿ 400 ಹುದ್ದೆಗೆ ನೇಮಕಾತಿ, ಬಿಎಸ್ಸಿ ಓದಿರಬೇಕು

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ಅವರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08272-225851.

ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ; 2022-23 ಸಾಲಿನಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಕ್ಷೇತ್ರ ಸಂಪನ್ಮೂಲ ಕೇಂದ್ರಗಳಲ್ಲಿ ಖಾಲಿಯಿರುವ 6 ಪ್ರೌಢಶಾಲಾ ವಿಭಾಗದ ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ನೇರಗುತ್ತಿಗೆ ಮೂಲಕ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವಿಶೇಷ ಬಿಇಡಿ ವಿದ್ಯಾರ್ಹತೆ ಹೊಂದಿ ಆರ್‌ಸಿಐನಲ್ಲಿ ನೋಂದಣಿ ಮಾಡಿಕೊಂಡಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

jobs news

ಆಸಕ್ತ ಅಭ್ಯರ್ಥಿಗಳು ಜೂನ್ 15ರ ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು ಹಾಗೂ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಸಂಪರ್ಕಿಸಬಹುದು.

ದೂರವಾಣಿ ಸಂಖ್ಯೆ 9448999400, 9481114485, 9480886941ಕ್ಕೆ ಕರೆ ಮಾಡಬಹುದಾಗಿದೆ ಎಂದು ಸಮಗ್ರ ಶಿಕ್ಷಣ ಅಭಿಯಾನ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಹಾಗೂ ಉಪ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

ಧಾರವಾಡದಲ್ಲಿ ಕೆಲಸ ಖಾಲಿ ಇದೆ; ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಮುಖ್ಯ ಕಾನೂನು ನೆರವು ರಕ್ಷಣಾ ಮಂಡಳಿಯ ಮುಖ್ಯಸ್ಥರು, ಉಪ ಮುಖ್ಯಸ್ಥರು ಹಾಗೂ ಸಹಾಯಕ ಕಾನೂನು ರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಯು 2 ವರ್ಷಗಳ ಅವಧಿಯದ್ದಾಗಿದೆ.

ಕ್ರಿಮಿನಲ್ ಲಾ ವಕೀಲಿ ವೃತ್ತಿಯಲ್ಲಿ ಕನಿಷ್ಠ 10 ವರ್ಷಗಳ ಅನುಭವ ಹೊಂದಿರುವವರು ಮುಖ್ಯ ಕಾನೂನು ನೆರವು ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 7 ವರ್ಷ ಅನುಭವ ಹೊಂದಿರುವವರು ಉಪಮುಖ್ಯ ಕಾನೂನು ನೆರವು ರಕ್ಷಕ ಹುದ್ದೆಗೆ ಅರ್ಜಿ ಹಾಕಬಹುದು.

ಕನಿಷ್ಠ 1 ರಿಂದ 3 ವರ್ಷಗಳ ಅನುಭವ ಹೊಂದಿರುವವರು ಸಹಾಯಕ ಕಾನೂನು ನೆರವು ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಮಾಡಲು ಜೂನ್ 20 ಕೊನೆಯ ದಿನವಾಗಿದೆ.

ಮುಖ್ಯ ಕಾನೂನು ನೆರವು ರಕ್ಷಕ ಹುದ್ದೆಗೆ 60 ಸಾವಿರದಿಂದ 1 ಲಕ್ಷ ರೂ. ಮಾಸಿಕ ಸಂಭಾವನೆ ನಿಗದಿ ಮಾಡಲಾಗಿದೆ. ಉಪಮುಖ್ಯ ಕಾನೂನು ನೆರವು ರಕ್ಷಕ ಹುದ್ದೆಗೆ 40 ಸಾವಿರದಿಂದ 75 ಸಾವಿರ ರೂ. ಹಾಗೂ ಸಹಾಯಕ ಕಾನೂನು ನೆರವು ರಕ್ಷಕ ಹುದ್ದೆಗೆ 25 ಸಾವಿರದಿಂದ 40 ಸಾವಿರ ರೂ.ಗಳವರೆಗೆ ಮಾಸಿಕ ಸಂಭಾವನೆ ನೀಡಲಾಗುತ್ತದೆ.

ಆಸಕ್ತು ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0836-2740128 ಸಂಪರ್ಕಿಸಬಹುದು ಅಥವಾ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಎಡಿಆರ್ ಕಟ್ಟಡ, ಸಿವಿಲ್ ಕೋರ್ಟ್ ಆವರಣ ಇವರ ಕಚೇರಿಗೆ ಭೇಟಿ ನೀಡಬಹುದಾಗಿದೆ.

English summary
Kodagu district employment exchange office organized job fair on June 16th. Job fair will be held from morning 10.30 am to 2 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X