ಕೊಡಗು; ಮೇ 29ರಂದು ಉದ್ಯೋಗ ಮೇಳ

ಮಡಿಕೇರಿ, ಮೇ 28; ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 29ರ ಸೋಮವಾರ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.

ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೋಮವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

Job Fair In Kodagu Employment

ಈ ಉದ್ಯೋಗ ಮೇಳದಲ್ಲಿ ಕ್ಲಬ್ ಮಹೀಂದ್ರ ರೆಸಾರ್ಟ್, ಮಡಿಕೇರಿ, ಹಿಮತ್ಸಂಗ ಲೈನ್ಸ್, ಹಾಸನ, ಹುಂಡೈ ಕಾರ್ ಶೋ ರೂಂ, ಮಡಿಕೇರಿ ಕಲ್ಯಾಣಿ ಮೋಟಾರ್ಸ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ವಿದ್ಯಾರ್ಹತೆಯ ವಿವರ; ಈ ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 8296020826 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಪ್ರಕಟಣೆ ಹೇಳಿದೆ.

ಉಡುಪಿಯಲ್ಲಿ ಉದ್ಯೋಗ ಮೇಳ; ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 29ರ ಸೋಮವಾರ ಮಿನಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ಆರಂಭವಾಗಲಿದೆ. ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ಪಡೆದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಪಾಲ್ಗೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8105618291, 9945856670 ಹಾಗೂ 9901472710.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+