ಶಿವಮೊಗ್ಗ, ಕೊಡಗು ಜಿಲ್ಲೆಯಲ್ಲಿ ಉದ್ಯೋ ಮೇಳ; ದಿನಾಂಕ, ವಿವರ
ಬೆಂಗಳೂರು, ಸೆಪ್ಟೆಂಬರ್ 13; ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಯಲ್ಲಿ ಉದ್ಯೋ ಮೇಳವನ್ನು ಆಯೋಜನೆ ಮಾಡಲಾಗಿದೆ. ಉದ್ಯೋಗ ಹುಡುಕುತ್ತಿರುವ ಯುವಕ/ ಯುವತಿಯರು ಮೇಳದಲ್ಲಿ ಪಾಲ್ಗೊಂಡು ಸದುಪಯೋಗ ಪಡೆಯುವಂತೆ ಮನವಿ ಮಾಡಲಾಗಿದೆ.
ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 14ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆವರೆಗೆ ಉದ್ಯೋಗ ಮೇಳ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ಕಲ್ಯಾಣಿ ಮೋಟಾರ್ಸ್, ಮಡಿಕೇರಿ. ಮಾಂಡವಿ ಮೋಟಾರ್ಸ್, ಮೈಸೂರು. ಆಟೋ ಲೈವ್, ಮೈಸೂರು. ಎಸ್‍ಎಲ್‍ಎನ್ ಕಾಫಿ. ಸಮರ್ಥ ನಿಧಿ ಲಿ., ಮಡಿಕೇರಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಪಾಲ್ಗೊಳ್ಳುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08272-225821 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಉದ್ಯೋಗ ಮೇಳ; ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಸೆಪ್ಟೆಂಬರ್ 15ರಂದು ಬೆಳಗ್ಗೆ 9 ಗಂಟೆಗೆ ಶಿವಮೊಗ್ಗದ ಸೈನ್ಸ್ ಮೈದಾನದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ. ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ, ಐಟಿಐ, ಡಿಪ್ಲೋಮಾ, ಬಿಕಾಂ, ಬಿಸಿಎ, ಬಿಇ, ಬಿಟೆಕ್, ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಕನಿಷ್ಠ 10 ರಿಂದ 15 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್‍ನೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ (ಕೆ.ಎಸ್.ಡಿ.ಸಿ.) ಜಿಲ್ಲಾಡಳಿತ ಭವನ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದು.
ಶಿವಮೊಗ್ಗದ ಬೃಹತ್ ಉದ್ಯೋಗ ಮೇಳದಲ್ಲಿ ಸುಮಾರು 5 ಸಾವಿರ ಹುದ್ದೆಗಳ ನೇಮಕಾತಿ ನಡೆಯುವ ನಿರೀಕ್ಷೆ ಇದೆ. ಆಸಕ್ತರು ಹೆಸರು ನೋಂದಣಿ ಮಾಡದಿದ್ದರೆ ನೇರವಾಗಿ ಸ್ಥಳಕ್ಕೆ ಆಗಮಿಸಿ ಹೆಸರು ನೋಂದಣಿ ಮಾಡಲು ಅವಕಾಶ ನೀಡಲಾಗಿದೆ.
ಉದ್ಯೋಗ ಮೇಳದಲ್ಲಿ ನೇಮಕಾತಿ ಹೊಂದದ ಅಭ್ಯರ್ಥಿಗಳ ವಿವರ ಸಂಗ್ರಹ ಮಾಡಲಾಗುತ್ತದೆ. ಬಳಿಕ ಅವರಿಗೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ.
ಕರೆ ಮಾಡಲು ದೂರವಾಣಿ ಸಂಖ್ಯೆಗಳು 8457825088, 9880005425, 0818225593.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸೆ. 15ರಂದು ಶಿವಮೊಗ್ಗದಲ್ಲಿ ಆಯೋಜಿಸಿದ್ದ ಉದ್ಯೋಗಮೇಳವನ್ನು ಕಾರಣಾಂತರದಿಂದ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.












Click it and Unblock the Notifications