ಕೋಲಾರದಲ್ಲಿ ಜ.4ಕ್ಕೆ ಉದ್ಯೋಗ ಮೇಳ, ಬೆಂಗಳೂರಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಗುಡ್‌ನ್ಯೂಸ್ ಇದೆ. ಕೋಲಾರದಲ್ಲಿ ಜನವರಿ 4ರಂದು ಉದ್ಯೋಗ ಮೇಳ ನಡೆಯಲಿದ್ದು. ವಿವಿಧ ಸಂಸ್ಥೆಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಇನ್ನು ಬೆಂಗಳೂರಿನ ಕೆ.ಆರ್ ವೃತ್ತದಲ್ಲಿರುವ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕ ವರ್ಷಕ್ಕೆ ಗಣಿತ, ಜೀವಶಾಸ್ತ್ರ ಮತ್ತು ಭಾರತದ ಸಂವಿಧಾನ ವಿಷಯಗಳನ್ನು ಪಾಠ ಮಾಡಲು ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.
ಕೋಲಾರದಲ್ಲಿ ಉದ್ಯೋಗ ಮೇಳ: ಕೋಲಾರದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಕೋಲಾರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜನವರಿ 4ರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಈ ಉದ್ಯೋಗ ಮೇಳ ನಡೆಯಲಿದೆ. ಟೆಲಿ ಪರ್ಫಾರ್ಮೆನ್ಸ್, ಕನೆಕ್ಟ್ ಬ್ಯುಸಿನೆಸ್, ಆಲ್ಸೆಕ್, ಗ್ಲಾಡ್‌ಹರ್ಟ್ ಇಂಟರ್ನ್ಯಾಷನಲ್ ಹಾಗೂ ರೂಮನ್ ಟೆಕ್ನಾಲಜೀಸ್ ಎನ್ನುವ ಸಂಸ್ಥೆ ಸೇರಿದಂತೆ ವಿವಿಧ ಸಂಸ್ಥೆಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಈ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಯಾರೆಲ್ಲ ಅರ್ಹರು: ಇನ್ನು ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮ, ಪದವೀಧರರು, ಸ್ನಾತಕೋತ್ತರ ಪದವಿ ಪೂರೈಸಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಲು ಇಚ್ಛಿಸುವವರು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್, ಬಯೋಡೇಟಾ, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ 4 ಭಾವಚಿತ್ರಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ: 7353232456 / 9740154413 ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಇಲ್ಲವೇ ಕೋಲಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವೇಳೆಯಲ್ಲಿ ಕರೆ ಮಾಡಬಹುದಾಗಿದೆ ಎಂದು ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆ ತಿಳಿಸಿದೆ.
ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನ ಕೆ.ಆರ್ ವೃತ್ತದಲ್ಲಿರುವ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 2024 -25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಗಣಿತ, ಜೀವಶಾಸ್ತ್ರ ಹಾಗೂ ಭಾರತದ ಸಂವಿಧಾನ ವಿಷಯಗಳನ್ನು ಪಾಠ ಮಾಡಲು ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಎಐಸಿಟಿಇ / ಯುಜಿಸಿ ನಿಯಮಗಳಿಗನುಸಾರ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ www.uvce.karnataka.gov.in ನಿಂದ ನಿಗದಿತ ಮಾದರಿಯ ಅರ್ಜಿ ಡೌಪ್ಲೋಡ್ ಮಾಡಿಕೊಂಡು ಅರ್ಜಿಯನ್ನು ಸಂಬಂಧಿತ ದಾಖಲೆಗಳ ಪ್ರತಿಗಳೊಂದಿಗೆ ಕುಲಸಚಿವರ ಕಚೇರಿ, ಯುವಿಸಿಇ, ಕೆ.ಆರ್ ವೃತ್ತ ವಿಳಾಸಕ್ಕೆ ಜನವರಿ 13ರ ಒಳಗೆ ಸಲ್ಲಿಸಬೇಕು ಎಂದು ಹೇಳಲಾಗಿದೆ. ಇನ್ನು ಈ ಅವಧಿಯ ನಂತರ ಬರುವ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಸಮನ್ವಯಧಿಕಾರಿ, ತಾಂತ್ರಿಕೇತರ ವಿಷಯ, ಇವರನ್ನು ಸಂಪರ್ಕಿಸಬಹುದು. ಸಂದರ್ಶನದ ದಿನಾಂಕವನ್ನು ವೆಬ್‌ಸೈಟ್‌ನಲ್ಲಿ ತಿಳಿಸಲಾಗುತ್ತದೆ ಅಥವಾ ಅರ್ಹ ಅಭ್ಯರ್ಥಿಗಳಿಗೆ ನೇರವಾಗಿ ತಿಳಿಸಲಾಗುತ್ತದೆ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications