ಡಿ.13 ರಂದು ಕೊಪ್ಪಳ ನಗರದಲ್ಲಿ ಉದ್ಯೋಗ ಮೇಳ
ಕೊಪ್ಪಳ, ಡಿಸೆಂಬರ್ 10; ಕೊಪ್ಪಳ ನಗರದಲ್ಲಿ ಡಿಸೆಂಬರ್ 13ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಸುಮಾರು 25 ರಿಂದ 30 ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.
ಕೊಪ್ಪಳ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಪ್ಪಳ ಜಂಟಿಯಾಗಿ ಉದ್ಯೋಗ ಮೇಳ ಆಯೋಜನೆ ಮಾಡಿವೆ.
ಡಿಸೆಂಬರ್ 13ರಂದು ಬೆಳಗ್ಗೆ 10 ಗಂಟೆಗೆ ಕೊಪ್ಪಳ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಕೈಗಾರಿಕೆ, ಕೃಷಿ, ಫಾರ್ಮಾ, ಹೆಲ್ತ್ ಸೆಕ್ಟರ್, ಬ್ಯಾಂಕಿಂಗ್, ಫೈನಾನ್ಸಿಯಲ್ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ನೇಮಕಾತಿ ನಡೆಯಲಿದೆ.

ಉದ್ಯೋಗ ಮೇಳದಲ್ಲಿ 25 ರಿಂದ 30 ಉದ್ಯೋಗದಾತ ಕಂಪನಿಗಳು ಭಾಗವಹಿಸಲಿದ್ದು, ಸುಮಾರು 1000 ಜನರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ.
ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದ ಉದ್ಯೋಗಾಕಾಂಕ್ಷಿಗಳು ದಾಖಲಾತಿಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಉದ್ಯೋಗದ ನೆರವಿಗಾಗಿ Skill Connect ಎಂಬ ಅಧಿಕೃತ ವೆಬ್‌ಪೋರ್ಟಲ್ ಅನ್ನು ತೆರೆಯಲಾಗಿದೆ.
ವಿದ್ಯಾರ್ಹತೆ ಅನುಸಾರವಾಗಿ ವಿವಿಧ ರೀತಿಯ ಕೌಶಲ್ಯ ಅನುಭವ ಹೊಂದಿರುವ ಅಭ್ಯರ್ಥಿಗಳು https://skillconnect.kaushalkar.com ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ಈ ಕಛೇರಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 9743839859, 9880758997, 9353515518.
ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನ; ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ (ಆರ್) ಸಂಸ್ಥೆ ಹಾಗೂ ಜೆಸಿಬಿ ಇಂಡಿಯಾ ಇವರ ಜಂಟಿ ಸಹಯೋಗದಲ್ಲಿ 18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕರಿಗೆ 30 ದಿನಗಳ ಉಚಿತ ಜೆಸಿಬಿ ಚಾಲನಾ ತರಬೇತಿಯನ್ನು ನೀಡಲಾಗುತ್ತಿದೆ.
ಆಸಕ್ತ ಯುವಕರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಡಿಸೆಂಬರ್ 25ರೊಳಗೆ ತಲುಪುವಂತೆ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ(ಆರ್), ವಿಸ್ತರಣಾ ಕೇಂದ್ರ ಹಸನಮಾಳ್, ದಾಂಡೇಲಿ-581325 ವಿಳಾಸಕ್ಕೆ ಕಳಿಸಬೇಕು.
ಅರ್ಜಿಗಳನ್ನು 8050741744, 9632143217, 9449782425 ಸಂಖ್ಯೆಗೆ ವಾಟ್ಸಪ್ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ 08284-298547 ಸಂಖ್ಯೆಗೆ ಕರೆ ಮಾಡಿ.












Click it and Unblock the Notifications