ಕೊಪ್ಪಳ; ಯಲಬುರ್ಗದಲ್ಲಿ ಫೆಬ್ರವರಿ 3ರಂದು ಉದ್ಯೋಗ ಮೇಳ

ಕೊಪ್ಪಳ, ಜನವರಿ 28; ಕೊಪ್ಪಳ ಜಿಲ್ಲೆಯ ಯಲಬುರ್ಗದಲ್ಲಿ ಫೆಬ್ರವರಿ 3ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ನಿರುದ್ಯೋಗಿ ಯುವಕ/ ಯುವತಿಯರು ಮೇಳದ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ ಇವರ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಡಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ಅವರು ಈ ಕುರಿತು ಮಾಹಿತಿ ನೀಡಿದ್ದು, ಫೆಬ್ರವರಿ 3ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಯಲಬುರ್ಗಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇಳ ನಡೆಯಲಿದೆ ಎಂದು ಹೇಳಿದ್ದಾರೆ.

 Job Fair In Koppal On February 3 2021

ಯಲಬುರ್ಗಾ ಪಟ್ಟಣದ ಬುದ್ಧ ಬಸವ ಅಂಬೇಡ್ಕರ್ ಭವನದ ಹತ್ತಿರ ಇರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ 20 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ನೇರವಾಗಿ ಭರ್ತಿ ಮಾಡಿಕೊಳ್ಳಲಿವೆ.

ಉದ್ಯೋಗ ಮೇಳದಲ್ಲಿ 10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮಾ, ಎಲ್ಲಾ ಪದವೀಧರರು ಹಾಗೂ ಕಂಪ್ಯೂಟರ್ ತರಬೇತಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು. ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳು ಮೇಳಕ್ಕೆ ಆಗಮಿಸುವಾಗ ಉದ್ಯೋಗವಕಾಶಕ್ಕಾಗಿ ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ತಮ್ಮ ಬಯೋಡಟಾ, ಆಧಾರ್ ಸಂಖ್ಯೆ ಹಾಗೂ ಭಾವಚಿತ್ರಗಳೊಂದಿಗೆ ಬರಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ಕೊಪ್ಪಳ ಇಲ್ಲಿಗೆ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 08539-220859, 8105848991.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕೆಂದು ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+