Get Updates
Get notified of breaking news, exclusive insights, and must-see stories!

ಕೊಪ್ಪಳದಲ್ಲಿ ಜನವರಿ 28ರಂದು ಉದ್ಯೋಗ ಮೇಳ

ಕೊಪ್ಪಳ, ಜನವರಿ 19: ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಜನವರಿ 28ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ನಿರುದ್ಯೋಗಿ ಯುವಕ/ ಯುವತಿಯರು ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಜನವರಿ 28ರ ಗುರುವಾರ ಉದ್ಯೋಗ ಮೇಳ ನಡೆಯಲಿದೆ. ಬೆಳಗ್ಗೆ 10 ರಿಂದ ಸಂಜೆ 4 ಗಂಟೆ ತನಕ ಮೇಳ ನಡೆಯಲಿದೆ.

ಎನ್. ಸಿ. ಎಸ್ ಉದ್ಯೋಗ ಮೇಳವನ್ನು ಕೊಪ್ಪಳ ನಗರದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳುವ ಮೂಲಕ ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

Job Fair In Koppal On January 28

ಉದ್ಯೋಗ ಮೇಳದಲ್ಲಿ ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಎಲ್ಲಾ ಪದವೀಧರರು ಹಾಗೂ ಕಂಪ್ಯೂಟರ್ ತರಬೇತಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು. ಮೇಳದಲ್ಲಿ ಪಾಲ್ಗೊಳ್ಳಲು ವಯೋಮಿತಿ 18 ರಿಂದ 35 ವರ್ಷಗಳು.

ಉದ್ಯೋಗ ಮೇಳದಲ್ಲಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಮೇಳದಲ್ಲಿ ಪಾಲ್ಗೊಳ್ಳುವಾಗ ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ತಮ್ಮ ಬಯೋಡೆಟಾ, ಆಧಾರ್ ಸಂಖ್ಯೆ ಹಾಗೂ ಭಾವಚಿತ್ರಗಳೊಂದಿಗೆ ಬರಬೇಕು ಎಂದು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ಕೊಪ್ಪಳ ಇಲ್ಲಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08539 - 220859, 8105848991.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+