
ಕೊಪ್ಪಳ; ಜನವರಿ 31ರಂದು ಉದ್ಯೋಗ ಮೇಳ
ಕೊಪ್ಪಳ, ಜನವರಿ 24; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಜನವರಿ 31ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. 18 ರಿಂದ 40 ವರ್ಷದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಎನ್. ಸಿ. ಎಸ್. ಪಿ ಅಡಿಯಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ಬೆಳಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೆ ನಗರದ ಅಶೋಕ ಸರ್ಕಲ್ ಹತ್ತಿರವಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಕರ್ನಾಟಕದ 5 ಲಕ್ಷ ಜನರಿಗೆ ಸ್ವಯಂ ಉದ್ಯೋಗ ಹೊಂದಲು ವಿವೇಕಾನಂದರ ಯೋಜನೆ ಜಾರಿ: ಬೊಮ್ಮಾಯಿ
ಉದ್ಯೋಗ ಮೇಳದಲ್ಲಿ 10ಕ್ಕಿಂತ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, ಈ ಕಂಪನಿಯವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡುತ್ತಿವೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ; ಜ.30ರ ತನಕ ಅರ್ಜಿ ಹಾಕಿ
ಉದ್ಯೋಗ ಮೇಳದಲ್ಲಿ ಎಸ್. ಎಸ್. ಎಲ್. ಸಿ., ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿಯ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ, ಬೆಂಗಳೂರಿನಲ್ಲಿ ಕೆಲಸ
ಆಸಕ್ತಿಯುಳ್ಳ ಯುವಕ ಮತ್ತು ಯುವತಿಯರಿಗೆ 18 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ ಜೊತೆ ಉದ್ಯೋಗ ಮೇಳಕ್ಕೆ ಆಗಮಿಸಬೇಕು.
ಆಧಾರ್ ಕಾರ್ಡ್ ಪ್ರತಿ, 5 ರೆಸ್ಯೂಮ್ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಈ ಉದ್ಯೋಗ ಮೇಳದದಲ್ಲಿ ಭಾಗವಹಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ಆಸಕ್ತ ಮತ್ತು ಅರ್ಹರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು.
ಕರೆ ಮಾಡಲು ದೂರವಾಣಿ ಸಂಖ್ಯೆಗಳು 08539-220859, 9353515518, 9880758997.
ಧಾರವಾಡದಲ್ಲಿ ಕೆಲಸ ಖಾಲಿ ಇದೆ; ಧಾರವಾಡದ ಕೃಷಿ ಮಹಾ ವಿದ್ಯಾಲಯದಲ್ಲಿ ಕೃಷಿ ಸಂಖ್ಯಾ ಶಾಸ್ತ್ರ ವಿಭಾಗಕ್ಕೆ ಒಂದು ಎಂಬಿಎ ಪದವಿಧರ ಸಹಾಯಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲಾಗುತ್ತಿದೆ. ಸಂದರ್ಶನದ ಮೂಲಕ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ.
ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಫೆಬ್ರವರಿ 2ರಂದು ಬೆಳ್ಳಗೆ 11 ಗಂಟೆಗೆ ಕೃಷಿ ಮಹಾವಿದ್ಯಾಲಯದ ಡೀನ್ ರವರ ಕೃಷಿನಿರ್ದೇಶಕರ ಕಚೇರಿಯಗೆ ಹಾಜರಾಗಬೆಕು.
ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳು ಹಾಗೂ ಎರಡು ಸೆಟ್ ಜೆರಾಕ್ಸ್ ಪ್ರತಿಗಳನ್ನು ತರಬೇಕು. ಹೆಚ್ಚಿನ ಮಾಹಿತಿಗಾಗಿ ಡೀನ್ ಕಚೇರಿ ಕೃಷಿ ಮಹಾವಿದ್ಯಾಲಯ ಧಾರವಾಡ-580005 ಇವರನ್ನು ಸಂಪರ್ಕಿಸಬಹುದು.