ಕೊಪ್ಪಳದಲ್ಲಿ ಮಾರ್ಚ್ 14, 15ರಂದು ಉದ್ಯೋಗ ಮೇಳ

ಬೆಂಗಳೂರು, ಫೆಬ್ರವರಿ 27 : ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಮಾರ್ಚ್ 14 ಮತ್ತು 15 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. 150ಕ್ಕೂ ಅಧಿಕ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.

ಕೊಪ್ಫಳ ಜಿಲ್ಲಾಡಳಿತ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಗಳು ಜಂಟಿಯಾಗಿ ಉದ್ಯೋಗ ಮೇಳವನ್ನು ಆಯೋಜಿಸಿವೆ.

ಮಾರ್ಚ್ 14 ರಂದು ಉದ್ಯೋಗಾಕಾಂಕ್ಷಿಗಳಿಗೆ ತರಬೇತಿಯನ್ನು ಆಯೋಜಿಸಲಾಗಿರುತ್ತದೆ. ವಿದ್ಯಾರ್ಹತೆಗೆ ಅನುಗುಣವಾಗಿ ಉತ್ತಮ ಉದ್ಯೋಗವಕಾಶ ಪಡೆಯಲು ಉದ್ಯೋಗಾಕಾಂಕ್ಷಿಗಳು ಮತ್ತು ನಿಯೋಜಕರನ್ನು ಒಂದೇ ವೇದಿಕೆಯಲ್ಲಿ ತರಲು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

Job Fair In Koppal On March 14 And 15

ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಸ್ಥಳೀಯ ಮಟ್ಟದ ಒಟ್ಟಾರೆ 150 ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. 18 ರಿಂದ 35 ವರ್ಷದ ವಯೋಮಿತಿಯವರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಅವಿದ್ಯಾವಂತರು ಮತ್ತು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ವಿವಿಧ ಪದವಿ, ಎಂಬಿಎ, ಎಂಟೆಕ್, ವಿವಿಧ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ವಿದ್ಯಾರ್ಹತೆ ಹೊಂದಿರುವ ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದು.

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಕೊಪ್ಪಳ ಜಿಲ್ಲಾಡಳಿತದ ವೆಬ್‌ಸೈಟ್‌ನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+