ಕೊಪ್ಪಳ; ಅಕ್ಟೋಬರ್ 15ರಂದು ಮಿನಿ ಉದ್ಯೋಗ ಮೇಳ

ಕೊಪ್ಪಳ, ಅಕ್ಟೋಬರ್ 12; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಕ್ಟೋಬರ್ 15ರಂದು ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. 18 ರಿಂದ 35 ವರ್ಷದೊಳಗಿನ ಯುವಕ ಮತ್ತು ಯುವತಿಯರು ಭಾಗವಹಿಸಬಹುದು.

ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3-30 ಗಂಟೆಯವರೆಗೆ ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ.

ಈ ಮಿನಿ ಉದ್ಯೋಗ ಮೇಳದಲ್ಲಿ ಕ್ರೆಡಿಟ್ ಗ್ರಾಮೀಣ ಕೂಟ ಪ್ರೈ.ಲಿ ಗಂಗಾವತಿ, ರಿಲಾಯನ್ಸ್ ಲೈಫ್ ಇನ್ಸೂರೆನ್ಸ್ ಹೊಸಪೇಟೆ, ಶ್ರೀ ಸಾಯಿ ಸೇವಾ ಸಂಸ್ಥೆ ಧಾರವಾಡ, ಯುರೇಖಾ ಪರ್ಬ್ಸ್ ಪ್ರೈ.ಲಿ ಮತ್ತು ಕ್ಲಿಕ್ ನೌಕರಿ ಡಾಟ್ ಕಾಮ್ ಹುಬ್ಬಳ್ಳಿ ಸಂಸ್ಥೆಗಳು ಭಾಗವಹಿಸುತ್ತಿವೆ.

Job Fair In Koppal On October 15

18 ರಿಂದ 35 ವರ್ಷದೊಳಗಿನ ಎಸ್ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಯಾವುದೇ ಪದವಿ ಪೂರ್ಣಗೊಳಿಸಿದ ಯುವಕ/ ಯುವತಿಯರು ಮಿನಿ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಮಿನಿ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ತಮ್ಮ ಸ್ವ-ವಿವರದ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9353515518.

ತರಬೇತಿಗೆ ಅರ್ಜಿ ಆಹ್ವಾನ; ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಸಂಸ್ಥೆ(ರಿ) ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ 45 ದಿನಗಳ ಉಚಿತ ಕಂಪ್ಯೂಟರ್ ಹಾರ್ಡವೇರ್ ಮತ್ತು ನೆಟ್ವರ್ಕಿಂಗ್ ತರಬೇತಿ ನೀಡಲಾಗುತ್ತದೆ, ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಬಿಪಿಎಲ್ ಕುಟುಂಬಕ್ಕೆ ಸೇರಿರಬೇಕು. ಅರ್ಜಿಯಲ್ಲಿ ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ಇತ್ಯಾದಿ ವಿವರಗಳನ್ನು ಬರೆದು ಸಲ್ಲಿಸಬೇಕು.

ಅರ್ಜಿಗಳನ್ನು ಕೆನರಾ ಬ್ಯಾಂಕ್ ದೇಶಪಾಂಡೆ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು. ತರಬೇತಿಯನ್ನು ಶೀಘ್ರದಲ್ಲೇ ಆರಂಭಿಸಲಾಗುತ್ತದೆ. ತರಬೇತಿ ಸಮಯದಲ್ಲಿ ಊಟ, ವಸತಿಯನ್ನು ಉಚಿತವಾಗಿ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 9483485489, 9482188780, 8197022501, 08284- 220807.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+