ಮಾರ್ಚ್ 9ರಂದು ಕೊಪ್ಪಳದಲ್ಲಿ ಉದ್ಯೋಗ ಮೇಳ
ಕೊಪ್ಪಳ ಜಿಲ್ಲಾ ರಜತ ಮಹೋತ್ಸವದ ಅಂಗವಾಗಿ ಮಾರ್ಚ್ 9ರಂದು ಕೊಪ್ಪಳದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಕೊಪ್ಪಳ, ಮಾರ್ಚ್ 05; ಕೊಪ್ಪಳದಲ್ಲಿ ಉದ್ಯೋಗ ಮೇಳವನ್ನು ಮಾರ್ಚ್ 9ರಂದು ಆಯೋಜನೆ ಮಾಡಲಾಗಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಇವರ ಸಂಯುಕ್ತಾಶ್ರಯದಲ್ಲಿ ಈ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಶನಿವಾರ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ. ಸುದರೇಶ ಬಾಬು ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಿದರು. ಮಾರ್ಚ್ 9ರಂದು ಬೆಳಗ್ಗೆ10 ಗಂಟೆಗೆ ತಾಲೂಕು ಕ್ರೀಡಾಂಗಣದಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ, ಉಪವಿಭಾಗಾಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಾಣೆಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಉದ್ಯೋಗ ಹುಡುಕುತ್ತಿರುವವರು ಉದ್ಯೋಗ ಮೇಳದಲ್ಲಿ ಅಗತ್ಯ ದಾಖಲೆಗಳ ಜೊತೆ ಪಾಲ್ಗೊಳ್ಳಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉದ್ಯೋಗ ಮೇಳದಲ್ಲಿ ಕೈಗಾರಿಕೆ, ಕೃಷಿ, ಫಾರ್ಮಾ, ಹೆಲ್ತ್ ಸೆಕ್ಟರ್, ಬ್ಯಾಕಿಂಗ್, ಫೈನಾನ್ಸಿಯಲ್‌ಗೆ ಸಂಬಂಧಿಸಿದ ವಿವಿಧ ಕ್ಷೇತ್ರಗಳಿಗೆ ನೇಮಕಾತಿ ನಡೆಯಲಿದೆ. ಮೇಳದಲ್ಲಿ ಸುಮಾರು 25 ರಿಂದ 40 ಕಂಪನಿಗಳು ಭಾಗವಹಿಸುತ್ತವೆ. ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆವುಳ್ಳ ಉದ್ಯೋಕಾಂಕ್ಷಿಗಳು ಸೂಕ್ತ ದಾಖಲಾತಿಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಉದ್ಯೋಗದ ನೆರವಿಗಾಗಿ Skill Connect ಎಂಬ ಅಧಿಕೃತ ವೆಬ್ ಪೋರ್ಟಲ್ ಇದೆ. ವಿದ್ಯಾರ್ಹತೆ ಅನುಸಾರವಾಗಿ ವಿವಿಧ ರೀತಿಯ ಕೌಶಲ್ಯ ಅನುಭವ ಹೊಂದಿರುವ ಅಭ್ಯರ್ಥಿಗಳು ಇಲ್ಲಿ ಹೆಸರು ನೋಂದಾಯಿಸಿಕೊಂಡು ಸದುಪಯೋಗ ಪಡೆದುಕೊಳ್ಳಲು ಅವಕಾಶವಿರುತ್ತದೆ.

ಉದ್ಯೋಗ ಮೇಳದ ಕುರಿತು ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ಈ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ. ಕರೆ ಮಾಡಲು ದೂರವಾಣಿ ಸಂಖ್ಯೆ 08539-225901, : 9880758997, 9353515518, 7676172603, 9164966349.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವವರು ನೋಂದಣಿ ಮಾಡಿಕೊಳ್ಳಬಹುದಾಗಿದೆ. https://docs.google.com/forms/d/e/1FAIpQLSdLKq7m9pdRcXOKThkCuTUxPVf6xT2BXHbEWtJvZtAQUgORsA/viewform
ಕೊಪ್ಪಳ ರಜತ ಮಹೋತ್ಸವ; ಕೊಪ್ಪಳ ಜಿಲ್ಲೆ ರಚನೆಯಾಗಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು 20 ವಿವಿಧ ಸಮಿತಿಗಳನ್ನು ರಚನೆ ಮಾಡಿದ್ದಾರೆ. ಮಾರ್ಚ್ 10 ಮತ್ತು 11 ರಂದು ಜಿಲ್ಲೆಯಲ್ಲಿ ಅದ್ಧೂರಿಯಾಗಿ ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಆಯೋಜನೆ ಮಾಡಲಾಗಿದೆ. ಇದಕ್ಕಾಗಿ ಲೋಗೊ ಮತ್ತು ಬ್ಯಾನರ್ ಬಿಡುಗಡೆ ಸಹ ಮಾಡಲಾಗಿದೆ.












Click it and Unblock the Notifications