ಏಪ್ರಿಲ್ 16ರಂದು ಕುಶಾಲನಗರದಲ್ಲಿ ಉದ್ಯೋಗ ಮೇಳ
ಮಡಿಕೇರಿ, ಏಪ್ರಿಲ್ 13: ಕೊಡಗು ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ಕುಶಾಲನಗರದಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತರು, ಅರ್ಹರು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಉಪಯೋಗ ಪಡೆದುಕೊಳ್ಳಬಹುದು.
ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಏಪ್ರಿಲ್ 16ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆವರೆಗೆ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ.

ಈ ಉದ್ಯೋಗ ಮೇಳದಲ್ಲಿ ರಾಣಿ ಮದ್ರಾಸ್ ಪ್ರೈ.ಲಿ., ಮೈಸೂರು, ಆಟೋ ಲೈವ್, ಕಾಡಕೊಳ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಕೂರ್ಗ್ ಜಂಗಲ್ ಕ್ಯಾಂಪ್ ರೆಸಾರ್ಟ್, ಕುಶಾಲನಗರ, ಮುತ್ತೂಟ್ ಪೈನಾನ್ಸ್, ಮೈಸೂರು, ಕಾವೇರಿ ಹೊಂಡಾ, ಕುಶಾಲನಗರ, ಪ್ಯಾಲೇಸ್ ಟಯೋಟ ಕಾರ್ ಶೋ ರೂಂ, ಕುಶಾಲನಗರ ಹಾಗೂ ಪರ್ಪಲ್ ಪಾಮ್ಸ್ ರೆಸಾರ್ಟ್, ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಖಾಲಿಯಿರುವ ವಿವಿಧ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದು.
ಉದ್ಯೋಗ ಮೇಳಕ್ಕೆ ಆಗಮಿಸುವ ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗಾಧಿಕಾರಿ ಸಿ. ಬಿ. ಮಂಜುನಾಥ ಅವರನ್ನು ಭೇಟಿ ಮಾಡಿ. ಕರೆ ಮಾಡಲು ದೂರವಾಣಿ ಸಂಖ್ಯೆಗಳು 8296020826.
ಗಂಗಾವತಿಯಲ್ಲಿ ಬೃಹತ್ ಉದ್ಯೋಗ ಮೇಳ: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಏಪ್ರಿಲ್ 17ರಂದು ಬೆಳಗ್ಗೆ 10 ರಿಂದ ಸಂಜೆ 4ರ ತನಕ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಗುಂಜಳ್ಳಿ ಹೀರೆ ನಾಗಪ್ಪ ವಾಣಿಜ್ಯ ಮಹಾವಿದ್ಯಾಲಯ, ಶ್ರೀ ಕೊಟ್ಟೂರೇಶ್ವರ ಕ್ಯಾಂಪಸ್ ಆವರಣ ಪಂಪ ನಗರ ಗಂಗಾವತಿ ಇಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಉದ್ಯೋಗ ಮೇಳದಲ್ಲಿ ಕೊಪ್ಪಳ, ಹುಬ್ಬಳ್ಳಿ, ಬೆಂಗಳೂರು, ಬೆಳಗಾವಿ, ಬಳ್ಳಾರಿ, ಹಾಸನ, ಶಿವಮೊಗ್ಗ ಇತರೆ ಭಾಗಗಳ ಪ್ರತಿಷ್ಟಿತ ಕಂಪನಿಗಳು ಭಾಗವಹಿಸುತ್ತವೆ. ವಿವಿಧ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ/ ತತ್ಸಮಾನ, ಐಟಿಐ, ಡಿಪ್ಲೋಮಾ, ಕಂಪ್ಯೂಟರ್ ತರಬೇತಿ ಹಾಗೂ ಯಾವುದೇ ಪದವಿ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ನಿರುದ್ಯೋಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹಾಗೂ ವಿಕಲಚೇತನ ಅಭ್ಯರ್ಥಿಗಳು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 10 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡ್ ಪ್ರತಿ, ರೆಸ್ಯೂಮ್ ಹಾಗೂ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 9353515518.












Click it and Unblock the Notifications