ಬೆಂಗಳೂರಿನಲ್ಲಿ ಫೆಬ್ರವರಿ 11ರಂದು ಉದ್ಯೋಗ ಮೇಳ

ಬೆಂಗಳೂರು, ಫೆಬ್ರವರಿ 08; ಬೆಂಗಳೂರಿನಲ್ಲಿ ನೇರ ಸಂದರ್ಶನ ಪೂರ್ವ ತರಬೇತಿ ಮತ್ತು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಉದ್ಯೋಗಾಕಾಂಕ್ಷಿಗಳು ಇದರ ಉಪಯೋಗ ಪಡೆದುಕೊಳ್ಳಬಹುದಾಗಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಫೆಬ್ರವರಿ 9ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ತನಕ ನೇರ ಸಂದರ್ಶನ ಪೂರ್ವ ತರಬೇತಿ ನಡೆಯಲಿದೆ.

ವಿಳಾಸ; ರೋಟರಿ ಹಾಲ್, ಸರ್ಕಾರಿ ಹೈಸ್ಕೂಲ್ ಕಾಂಪೌಂಡ್, 13ನೇ ಕ್ರಾಸ್, ಮಲ್ಲೇಶ್ವರ, ಬೆಂಗಳೂರು.

Job Fair In Malleshwaram Bengaluru On February 11

ಫೆಬ್ರವರಿ 11 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಸರ್ಕಾರಿ ಪ್ರಥಮ ದರ್ಜೆ ಹಾಗೂ ಪಿಯು ಕಾಲೇಜ್ ಆವರಣ, 18ನೇ ಕ್ರಾಸ್, ಮಲ್ಲೇಶ್ವರ, ಬೆಂಗಳೂರು ಇಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಎಸ್. ಎಸ್. ಎಲ್. ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇ ಮತ್ತು ಯಾವುದೇ ಪದವಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಈ ಸದಾವಕಾಶವನ್ನು ಬಳಸಿಕೊಳ್ಳಬಹುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೋಂದಣಿಗಾಗಿ ಈ ಲಿಂಕ್ ಬಳಕೆ ಮಾಡಬಹುದಾಗಿದೆ. https://skillconnect.kaushalkar.com/candidatereg

ಉದ್ಯೋಗ ಮೇಳಕ್ಕೆ ಆಗಮಿಸುವವರು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್, ಆಧಾರ್ ಕಾರ್ಡ್ ಹಾಗೂ ಸ್ವ ವಿವರಗಳೊಂದಿಗೆ ಪಾಲ್ಗೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9964907444, 8105020115, 9108347465.

ಶಿವಮೊಗ್ಗದಲ್ಲಿ ನೇರ ಸಂದರ್ಶನ; ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

2 ಸ್ತ್ರೀರೋಗ ತಜ್ಞರು, 2 ಮಕ್ಕಳ ತಜ್ಞರು ಹಾಗೂ 3 ಅರವಳಿಕೆ ತಜ್ಞರು ಸೇರಿ ಒಟ್ಟು 7 ತಜ್ಞ ವೈದ್ಯರ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ & ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತಿದೆ.

ಅಭ್ಯರ್ಥಿಗಳ ಆಯ್ಕೆಗೆ ಫೆಬ್ರವರಿ 10ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ. ಹೆಚ್. ರಸ್ತೆ ಶಿವಮೊಗ್ಗ ಇಲ್ಲಿ ನೇರ ಸಂದರ್ಶನ ನಡೆಯಲಿದೆ.

ಆಸಕ್ತರು ತಮ್ಮ ವಿದ್ಯಾರ್ಹತೆ/ ತರಬೇತಿಯ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-222382ಕ್ಕೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+