ಮಂಡ್ಯದಲ್ಲಿ ಡಿಸೆಂಬರ್ 21ರಂದು ಉದ್ಯೋಗ ಮೇಳ

ಮಂಡ್ಯ, ಡಿಸೆಂಬರ್ 18 : ಮಂಡ್ಯದಲ್ಲಿ ಡಿಸೆಂಬರ್ 21ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಸುಮಾರು 2 ಸಾವಿರ ಜನರಿಗೆ ಉದ್ಯೋಗ ಕಲ್ಪಿಸಿಕೊಡಬೇಕು ಎಂಬ ಗುರಿಯೊಂದಿಗೆ ಮೇಳವನ್ನು ಆಯೋಜಿಸಲಾಗಿದೆ.

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು ನಗರಸಭೆ ಮಂಡ್ಯ ಜಂಟಿಯಾಗಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ನಗರದ ಸರ್ಕಾರಿ ಮಹಾವಿದ್ಯಾಲಯದಲ್ಲಿ ಮೇಳ ನಡೆಯಲಿದೆ.

"ಮಂಡ್ಯ, ಮೈಸೂರು, ಬಿಡದಿ, ರಾಮನಗರ, ಹಾಸನ, ಶ್ರೀರಂಗಪಟ್ಟಣ ಮತ್ತು ಬೆಂಗಳೂರು ಸೇರಿದಂತೆ ಇನ್ನಿತರ ಪ್ರದೇಶಗಳ ಕಂಪನಿಗಳನ್ನು ಕರೆತನ್ನಿ. ಈ ಮೂಲಕ ಯುವಕರು, ನಿರುದ್ಯೋಗಿಗಳು, ಮಹಿಳೆಯರು ಮತ್ತು ಅಂಗವಿಕಲರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಒಂದು ವೇದಿಕೆಯನ್ನು ನಿರ್ಮಿಸೋಣ" ಎಂದು ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಕರೆ ನೀಡಿದರು.

Job Fair In Mandya On December 21

ಉದ್ಯೋಗ ಮೇಳದಲ್ಲಿ ಜೆ.ಕೆ ಟೈರ್ಸ್, ರಾಣಿ ಮದ್ರಾಸ್, ಗಿಲ್‍ವುಡ್, ಗೋಕುಲ್‍ದಾಸ್, ಶಾಹಿ ಗ್ರೂಪ್ಸ್, ಅಕ್ವೇರಲ್ ಪ್ರೈ.ಲಿ, ಗಿರೀಶ್ ಎಕ್ಸಪೋರ್ಟ್, ಚೋಳ ಪೀಪಲ್ ಅಂಡ್ ಮಾರ್ಕೆಟಿಂಗ್ ಸರ್ವಿಸಸ್, ಇಕ್ವಿಟಾಸ್ ಸ್ಮಾಲ್ ಪೈನಾನ್ಸ್, ಹೆಚ್.ಡಿ.ಬಿ ಪೈನಾನ್ಸ್, ಲೈಟ್ನಿಂಗ್, ವಿಧಾತ್ರಿ ಮೋಟರ್ಸ್, ಅರಸ್ ಟಾಟಾ ಮೋಟರ್ಸ್, ಅಪೋಲೊ ಹೋಮ್ ಹೆಲ್ತ್ ಕೇರ್ ಸೇರಿದಂತೆ ವಿವಿಧ ಕಂಪನಿಗಳು ಪಾಲ್ಗೊಳ್ಳಲಿವೆ.

50ಕ್ಕೂ ಅಧಿಕ ಕಂಪನಿಗಳು ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಮೂಲ ಪ್ರಮಾಣ ಪತ್ರಗಳು, ಸ್ವ ವಿವರ, 2 ಭಾವ ಚಿತ್ರಗಳು ಹಾಗು ವಿದ್ಯಾರ್ಹತೆಯ ಪ್ರಮಾಣ ಪತ್ರಗಳ ಜೆರಾಕ್ಸ್ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಹಾಜರಾಗಬೇಕು.

ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಬಿಎಸ್ಸಿ (ನರ್ಸಿಂಗ್), ಬಿ.ಇ. ವ್ಯಾಸಂಗ ಮಾಡಿರುವವರು ಪಾಲ್ಗೊಳ್ಳಬಹುದು. ಚಾಲಕರ ಹುದ್ದೆಗಳಿಗೆ ನೇಮಕಾತಿ ಬಯಸುವವರು ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08232-220126 ಹಾಗೂ 9986263695.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+