ನವೆಂಬರ್ 30ರಂದು ಮೈಸೂರಿನಲ್ಲಿ ಉದ್ಯೋಗ ಮೇಳ
ಮೈಸೂರು, ನವೆಂಬರ್ 27 : ಮೈಸೂರಿನಲ್ಲಿ ನವೆಂಬರ್ 30ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 70 ರಿಂದ 80 ಕಂಪನಿಗಳು ಪಾಲ್ಗೊಳ್ಳಲಿದ್ದು, ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಲಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಜಂಟಿಯಾಗಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಿವೆ. ಶನಿವಾರ ಬೆಳಗ್ಗೆ 10.30ಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಮೇಳ ನಡೆಯಲಿದೆ.
ಮೈಸೂರು, ಬೆಂಗಳೂರಿನ ಹೆಸರಾಂತ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿದ್ದು, ಸಂದರ್ಶನದ ಮೂಲಕ ವಿವಿಧ ಹುದ್ದೆಗಳಿಗೆ ಪುರುಷ/ಮಹಿಳಾ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ನಿರುದ್ಯೋಗಿ ಯುವಕ/ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮತ್ತು ವಿವಿಧ ವಿಶ್ವವಿದ್ಯಾಲಯದಿಂದ ಪದವಿ ಪಡೆದರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪಡೆದವರು ಪಾಲ್ಗೊಳ್ಳಬಹುದು.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಗಮಿಸುವವರು ಕಡ್ಡಾಯವಾಗಿ ರೆಸ್ಯೂಮ್, ಆಧಾರ್ ಕಾರ್ಡ್ ತರಬೇಕು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಾಗಿಲ್ಲ.
ಹೆಚ್ಚಿನ ಮಾಹಿತಿಗಾಗಿ 0821-2489972, 9964697521 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.












Click it and Unblock the Notifications