ಪೊನ್ನಪೇಟೆಯಲ್ಲಿ ಫೆ.23ರಂದು ಉದ್ಯೋಗ ಮೇಳ

ಮಡಿಕೇರಿ, ಫೆಬ್ರವರಿ 14 : ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಫೆ.23ರಂದು ಆಯೋಜನೆ ಮಾಡಲಾಗಿದೆ.

ಕೊಡಗು ಜಿಲ್ಲಾಡಳಿತ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಗಳ ಸಹಯೋಗದಲ್ಲಿ ಭಾರತ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ ಅಡಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಫೆಬ್ರವರಿ 23 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯಲಿದೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳಿಗೆ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ.

Job fair in Ponnampet on February 23

ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿಗಿಂತ ಕಡಿಮೆ, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐ.ಟಿ.ಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದು.

ಉದ್ಯೋಗಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಆನ್‍ಲೈನ್‍ನಲ್ಲಿ ಹೆಸರು ನೋಂದಾಯಿಸಿಕೊಳ್ಳದ ಅಭ್ಯರ್ಥಿಗಳು ಉದ್ಯೋಗಮೇಳ ನಡೆಯುವ ಸ್ಥಳದಲ್ಲೇ ತಮ್ಮ ಹೆಸರನ್ನು ನೋಂದಾಯಿಸಬಹುದು.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ನೋಂದಣಿ ಹಾಗೂ ಸಂದರ್ಶನ ಉಚಿತವಾಗಿರುತ್ತದೆ. ಅಭ್ಯರ್ಥಿಗಳು ಕನಿಷ್ಠ 10 ಬಯೋಡೇಟಾಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿಯನ್ನು ಸಂಪರ್ಕಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+