
ಬೆಂಗಳೂರಿನಲ್ಲಿ ಶನಿವಾರ ಉದ್ಯೋಗ ಮೇಳ, ಪ್ರವೇಶ ಉಚಿತ
ಬೆಂಗಳೂರು, ಡಿಸೆಂಬರ್ 02; ಬೆಂಗಳೂರಿನ ರಾಜಾಜಿನಗರದ ಎಂ. ಇ. ಐ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಸೆಂಬರ್ 3ರ ಶನಿವಾರ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ತಾಂತ್ರಿಕ) ಹಾಗೂ ಎಂ. ಇ. ಐ ಪಾಲಿಟೆಕ್ನಿಕ್ ಕಾಲೇಜು ಸಹಯೋಗದೊಂದಿಗೆ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೇಮಕಾತಿ; ಸ್ಪಷ್ಟನೆಗಳು
ನಿರುದ್ಯೋಗಿ ಯುವಕ/ ಯವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಅನುಕೂಲವಾಗುವಂತೆ ಶನಿವಾರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯ ತನಕ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಸುರತ್ಕಲ್ ಟೋಲ್ ರದ್ದು; ಉದ್ಯೋಗ ಕಳೆದುಕೊಂಡ 50 ಜನ
ಈ ಉದ್ಯೋಗ ಮೇಳದಲ್ಲಿ ಖಾಸಗಿ ವಲಯದ ಹಲವು ಹೆಸರಾಂತ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮಲ್ಲಿ ಲಭ್ಯವಿರುವ ವಿವಿಧ ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ನೇರವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ.
4,100 ಉದ್ಯೋಗ ಕಡಿತಕ್ಕೆ ಮುಂದಾದ ಸಿಸ್ಕೋ
ಈ ಉದ್ಯೋಗ ಮೇಳದಲ್ಲಿ ಎಸ್. ಎಸ್. ಎಲ್. ಸಿ. (ಉತ್ತಿರ್ಣ/ ಅನುತ್ತೀರ್ಣ), ಪಿಯುಸಿ, ಐಟಿಐ, ಡಿಪ್ಲೊಮಾ, ಸಾಮಾನ್ಯ ಪದವೀಧರರು ಹಾಗೂ ಸ್ನಾತ್ತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶಗಳು ಲಭ್ಯವಿರುತ್ತದೆ.
ಅಭ್ಯರ್ಥಿಗಳು ತಮ್ಮ ವೈಯುಕ್ತಿಕ ವಿವರಗಳ ರೆಸ್ಯೂಮ್‌ನ ಹಲವು ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಉದ್ಯೋಗ ಮೇಳ ನಡೆಯುವ ಸ್ಥಳ; ಎಂ. ಇ. ಐ. ಪಾಲಿಟೆಕ್ನಿಕ್ ಕಾಲೇಜು, ರಾಜಾಜಿನಗರ ಬೆಂಗಳೂರು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ 080-22611841/ 99027 36747/ 99649 07444/ 99649 08444 ವೆಬ್‌ಸೈಟ್ ಸಂಪರ್ಕಿಸಬಹುದಾಗಿದೆ.
ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ; ಕೃಷಿ ವಿಶ್ವವಿದ್ಯಾಲಯ ಧಾರವಾಡದ ಕೃಷಿ ವಿಸ್ತರಣಾ ಶಿಕ್ಷಣ ವಿಭಾಗದಲ್ಲಿ ಒಂದು ಅರೆಕಾಲಿಕ ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಮನಃಶಾಸ್ತ್ರ ವಿಷಯದಲ್ಲಿ ಪದವಿ ಪಡೆದವರಿಂದ ಅರ್ಜಿ ಆಹ್ವಾನಿಸಿದೆ. ಎಂಎ/ ಪಿಎಚ್‌ಡಿ ಪದವಿಯೊಂದಿಗೆ ಬೋಧನಾ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದು.
ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಡಿಸೆಂಬರ್ 6ರಂದು ಬೆಳಿಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಕೃವಿವಿ ವೆಬ್‌ಸೈಟ್ www.uasd.edu ಭೇಟಿ ನೀಡಬಹುದಾಗಿದೆ.