Channapatna: ಚನ್ನಪಟ್ಟಣದಲ್ಲಿ ಆಗಸ್ಟ್ 30ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
ರಾಮನಗರ, ಆಗಸ್ಟ್ 21: ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಗಸ್ಟ್ 30ರಂದು ಆಯೋಜಿಸಲಾಗಿದೆ. 5 ಸಾವಿರಕ್ಕೂ ಅಧಿಕ ಮಹಿಳೆಯರಿಗೆ ಉದ್ಯೋಗವಕಾಶವಿದ್ದು, ಆಸಕ್ತ, ಅರ್ಹರು ಅಗತ್ಯ ದಾಖಲೆಗಳ ಜೊತೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ರಾಮನಗರ ಇವರ ಸಹಯೋಗದಲ್ಲಿ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಅಂಚೆ ಕಛೇರಿ ರಸ್ತೆ, ಚನ್ನಪಟ್ಟಣ ಇಲ್ಲಿ ಆಗಸ್ಟ್ 30ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 150ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಭಾಗಿಯಾಗಲಿದ್ದು, 10 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶವಿದೆ. ಮಹಿಳೆಯರಿಗೆ 5 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶವಿದೆ. ಆಸಕ್ತರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಕರೆ ನೀಡಲಾಗಿದೆ.
ವಿದ್ಯಾರ್ಹತೆ ವಿವರ: ಚನ್ನಪಟ್ಟಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ (ಉತ್ತೀರ್ಣ/ ಅನುರ್ತೀರ್ಣ), ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಎಲ್ಲಾ ಪದವೀಧರರು ಪಾಲ್ಗೊಳ್ಳಬಹುದು ಎಂದು ತಿಳಿಸಿದೆ.
ಉದ್ಯೋಗ ಹುಡುಕುತ್ತಿರುವ ಯುವಕ/ ಯುವತಿಯರು ಅಗತ್ಯ ದಾಖಲೆಗಳ ಜೊತೆಗೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು. ಆಸಕ್ತರು ನೋಂದಣಿ ಮಾಡಿಕೊಳ್ಳಲು https://skillconnect.kaushalkar.com/ ಲಿಂಕ್ ಅನ್ನು ಬಳಕೆ ಮಾಡಬಹುದು.
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಕರ್ನಾಟಕ ಸರ್ಕಾರವು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ದಿನಾಂಕ 30-08-2024 ರಂದು ಆಯೋಜಿಸಿದೆ. 150 ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪೆನಿಗಳು ಈ ಉದ್ಯೋಗ ಮೇಳದಲ್ಲಿ ಭಾಗಿಯಾಗಲಿದ್ದು, ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು - pic.twitter.com/87Qo8iqYXX
— 𝐊.𝐒.𝐃.𝐂 - ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (@Skill_Karnataka) August 20, 2024
ಚಿತ್ರದುರ್ಗದಲ್ಲಿ ಉದ್ಯೋಗ ಮೇಳ: ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಗಸ್ಟ್ 23ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 3ರ ತನಕ ನೇರ ನೇಮಕಾತಿಗಾಗಿ ಸಂದರ್ಶನ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ 3ಕ್ಕೂ ಹೆಚ್ಚಿನ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆಮಾಡಿಕೊಳ್ಳಲಿವೆ.
ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿರುವ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನಕ್ಕೆ ಆಗಮಿಸುವಾಗ 5 ಪ್ರತಿ ಬಯೋಡೇಟಾ, ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಫೋಟೋಗಳನ್ನು ತರಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ರಸ್ತೆ ತಿರುವಿನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಗೆ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 7022459064, 8105619020, 9945587060ಗೆ ಸಂಪರ್ಕಿಸಬಹುದು.
ಹೊರಗುತ್ತಿಗೆ ನೇಮಕಾತಿ: ಆಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹೊಸದಾಗಿ ಸೃಜಿಸಿರುವ ಯೋಜನಾ ನಿರ್ವಹಣಾ ತಂಡ ಜಿಲ್ಲಾ ಮಟ್ಟದ ಸಲಹೆಗಾರರು-1 ಹುದ್ದೆ ಮತ್ತು ತಾಂತ್ರಿಕ ಸಹಾಯಕರು-2 ಹುದ್ದೆಗಳು ಹೊರಗುತ್ತಿಗೆ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ಮಟ್ಟದ ಸಲಹೆಗಾರರ ಹುದ್ದೆಗೆ BSC Agricultural ಪದವಿ ಹೊಂದಿದ್ದು, Agronomy/ soil Science / plant protection or Any Other Agricultural Subjects with Computer knowledge ಹಾಗೂ ತಾಂತ್ರಿಕ ಸಹಾಯಕರು ಹುದ್ದೆಗೆ BSC Agriculture ಪದವಿ with Computer knowledge ಹೊಂದಿರಬೇಕು.
ಅರ್ಜಿಗಳನ್ನು ಸೂಕ್ತ ದಾಖಲೆಗಳೊಂದಿಗೆ ಆಗಸ್ಟ್ 29 ರೊಳಗಾಗಿ ಕಚೇರಿಯ ಅವಧಿಯೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ಸಂಕೀರ್ಣ, ಎಸ್. ಕರಿಯಪ್ಪ ರಸ್ತೆ (ಕನಕಪುರ ರಸ್ತೆ) ಬನಶಂಕರಿ, ಬೆಂಗಳೂರು- 560070 ಇಲ್ಲಿಗೆ ಸಂಪರ್ಕಿಸಬಹುದು.












Click it and Unblock the Notifications