ಏಪ್ರಿಲ್‌ 30ರಂದು ರಾಮನಗರದಲ್ಲಿ ಉದ್ಯೋಗ ಮೇಳ

Posted By:
Subscribe to Oneindia Kannada

ರಾಮನಗರ, ಏಪ್ರಿಲ್ 26 : ರಾಮನಗರದಲ್ಲಿ ಏಪ್ರಿಲ್ 30ರಂದು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. 4 ಸಾವಿರ ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಬೆಂಗಳೂರಿನ ಜಿ 4 ಎಸ್ ಸೆಕ್ಯೂರ್ ಸಲ್ಯೂಷನ್ಸ್ (ಇಂಡಿಯಾ) ಕಂಪೆನಿ ರಾಮನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಹಮ್ಮಿಕೊಂಡಿದೆ. ರಾಜ್ಯದಲ್ಲಿ 4 ಸಾವಿರ ಭದ್ರತಾ ಸಿಬ್ಬಂದಿ ನೇಮಕಕ್ಕೆ ಮೇಳ ಆಯೋಜಿಸಲಾಗಿದೆ. [555 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಅರಣ್ಯ ಇಲಾಖೆ]

jobs

35 ವರ್ಷದೊಳಗಿನ ಯುವಕರು ಉದ್ಯೋಗ ಮೇಳಕ್ಕೆ ಹಾಜರಾಗಬಹುದು. ಎಸ್‌ಎಸ್‌ಎಲ್‌ಸಿ ತೇರ್ಗಡೆಯಾಗಿರಬೇಕು. ಏಪ್ರಿಲ್ 30ರಂದು ಬೆಳಗ್ಗೆ 10.30ಕ್ಕೆ ಉದ್ಯೋಗ ಮೇಳ ಆರಂಭವಾಗಲಿದೆ. [KPSC ನೇಮಕಾತಿ, ಅರ್ಜಿ ಸಲ್ಲಿಕೆಗೆ ಮೇ 5 ಕೊನೆ ದಿನ]

ಉದ್ಯೋಗ ಮೇಳಕ್ಕೆ ಬರುವ ಅಭ್ಯರ್ಥಿಗಳು ಸ್ವ ವಿವರದ ಪತ್ರ, ಹುಟ್ಟಿದ ದಿನಾಂಕ, ವಿದ್ಯಾರ್ಹತೆ, ಇನ್ನಿತರ ದಾಖಲೆಗಳೊಂದಿಗೆ ರಾಮನಗರದ ಕಂದಾಯ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಹಾಜರಾಗಬಹುದಾಗಿದೆ.

ಉದ್ಯೋಗವಕಾಶಗಳು

* ಗುಲ್ಬರ್ಗ ವಿದ್ಯುತ್‌ ಸರಬರಾಜು ಕಂಪೆನಿ (ಜೆಸ್ಕಾಂ) 1,840 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 29, 2016. [ಜೆಸ್ಕಾಂ ನೇಮಕಾತಿ ಅಧಿಸೂಚನೆ ವಿವರಗಳು]

* ಬೆಂಗಳೂರು ದೂರದರ್ಶನ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ಜಿಲ್ಲಾ ಕೇಂದ್ರಗಳಲ್ಲಿ ಸ್ಟ್ರಿಂಜರ್‌ಗಳಾಗಿ ಕಾರ್ಯನಿರ್ವಹಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಮೇ 13, 2016 ಅರ್ಜಿ ಸಲ್ಲಿಸಲು ಕೊನೆಯ ದಿನ. [ದೂರದರ್ಶನ ಕೇಂದ್ರದಲ್ಲಿ ಕೆಲಸ ಖಾಲಿ ಇದೆ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
G4S Security Services India Pvt. Ltd. organized Job fair in district employment exchange office Ramanagara on April 30, 2016.
Please Wait while comments are loading...