ಉದ್ಯೋಗ ವಾರ್ತೆ; ರಾಮನಗರ, ಧಾರವಾಡದಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ಜೂನ್ 29; ರಾಮನಗರದಲ್ಲಿ ಜೂನ್ 30ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಜಿಲ್ಲಾ ಬಾಲಭವನಕ್ಕೆ ಒಬ್ಬರು ಕಾರ್ಯಕ್ರಮ ಸಂಯೋಜಕರ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ.

ರಾಮನಗರದಲ್ಲಿ ಜೂನ್ 30ರ ಗುರುವಾರ ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಜಿಲ್ಲಾಡಳಿತ ಮತ್ತು ಕೌಶಲ್ಯಾಭಿವೃದ್ಧಿ ನಿಗಮದ ಸಹಯೋಗದಲ್ಲಿ ಈ ಉದ್ಯೋಗ ಮೇಳ ನಡೆಯಲಿದೆ.

ರಾಮನಗರದ ಸ್ಕಿಲ್‌ ಹಬ್‌ನಲ್ಲಿ ಬೆಳಗ್ಗೆ 10ಕ್ಕೆ ಮಿನಿ ಉದ್ಯೋಗ ಮೇಳಕ್ಕೆ ಚಾಲನೆ ಸಿಗಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ & ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಇದರ ಸುದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

Job Fair In Ramanagara On June 30th

ಮಿನಿ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವವರು ವ್ಯಾಸಂಗದ ಪ್ರಮಾಣ ಪತ್ರಗಳು, ಎರಡು ಪ್ರತಿ ರೆಸ್ಯೂಮ್‌ನೊಂದಿಗೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9606650597, 7411845322.

ಧಾರವಾಡದಲ್ಲಿ ಕೆಲಸ ಖಾಲಿ ಇದೆ; ಧಾರವಾಡ ಜಿಲ್ಲಾ ಬಾಲಭವನದಲ್ಲಿ ಮಕ್ಕಳ ಕಾರ್ಯಕ್ರಮ ಮತ್ತು ಚಟುವಟಿಕೆಗಳನ್ನು ಸುಗಮವಾಗಿ ನಡೆಸಲು ಒಬ್ಬರು ಕಾರ್ಯಕ್ರಮ ಸಂಯೋಜಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ಈ ಹುದ್ದೆಯನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಯಾವುದಾದರೂ ಪದವಿ ಮತ್ತು ಕಂಪ್ಯೂಟರ್ ಜ್ಞಾನದೊಂದಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳ ಯಾವುದಾದರೂ ಒಂದು ಕಲಾ ಕ್ಷೇತ್ರಗಳಲ್ಲಿ ಕೌಶಲ್ಯ ಹೊಂದಿರಬೇಕು.

ಬಾಲಭವನದಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಆಧರಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಜುಲೈ 14ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲಭವನ, ಉಪನಿರ್ದೆಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಧಾರವಾಡ, ಡಿ.ಸಿ ಕಂಪೌಂಡ್, ಈಜುಕೊಳದ ಎದುರು, ಧಾರವಾಡ ಇಲ್ಲಿಗೆ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 0836-2447850.

ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರ; ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಇವರ ವತಿಯಿಂದ ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತಿಯುಳ್ಳ ಮಹಿಳೆಯರಿಗೆ ಒಂದು ದಿನದ ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರವನ್ನು ಕಲಬುರಗಿಯಲ್ಲಿ ಆಯೋಜನೆ ಮಾಡಲಾಗಿದೆ.

ಈ ಶಿಬಿರದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯಕ್ಕಾಗಿ ಇರುವ ಸರ್ಕಾರದ ಯೋಜನೆಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ.

ತರಬೇತಿಯಲ್ಲಿ ಪಾಲ್ಗೊಳ್ಳಲು ವಯೋಮಿತಿ 20 ರಿಂದ 40 ವರ್ಷಗಳು. ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ. ಉತ್ತೀರ್ಣರಾಗಿರಬೇಕು. ಅನುತ್ತೀರ್ಣರಾದ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ತರಬೇತಿಯಲ್ಲಿ ಭಾಗವಹಿಸಲು ಆಸಕ್ತ ಮಹಿಳೆಯರು ಸರ್ಕಾರಿ ಬಾಲಕರ ಐಟಿಐ ಆವರಣ, ಎಂ. ಎಸ್. ಕೆ. ಮಿಲ್ ರಸ್ತೆ, ಕಲಬುರಗಿ-585102 ಇಲ್ಲಿಗೆ ಹಾಜರಾಗಿ ಜೂನ್ 30ರೊಳಗಾಗಿ ಅರ್ಜಿ ಸಲ್ಲಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 9916006910, 8618797704 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+