ಯಾದಗಿರಿಯಲ್ಲಿ ಫೆ. 16ರಂದು ಉದ್ಯೋಗ ಮೇಳ

ಯಾದಗಿರಿ, ಫೆಬ್ರವರಿ 14; ಯಾದಗಿರಿ ಜಿಲ್ಲೆಯಲ್ಲಿ ಒಂದು ದಿನದ ಉದ್ಯೋಗ ಮೇಳವನ್ನು ಫೆಬ್ರವರಿ 16ರಂದು ಆಯೋಜಿಸಲಾಗಿದೆ. ಆಸಕ್ತ ಯುವಕ/ಯುವತಿಯರು ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ರಾಷ್ಟ್ರೀಯ ವೃತ್ತಿ ಸೇವಾ ಅಡಿಯಲ್ಲಿ ಒಂದು ದಿನದ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಫೆಬ್ರವರಿ 16 ರಂದು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯ ವರೆಗೆ ಉದ್ಯೋಗ ಮೇಳ ನಡೆಯಲಿದೆ.

ಶಹಾಪೂರದ ಸರಕಾರಿ ಪದವಿ ಮಹಾ ವಿದ್ಯಾಲಯದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಪಾಲ್ಗೊಳ್ಳುವವರಿಗೆ ಯಾವುದೇ ರೀತಿಯ ಭತ್ಯೆ ನೀಡುವುದಿಲ್ಲ ಎಂದು ಜಿಲ್ಲಾ ಉದ್ಯೋಗ ವಿನಿಮಯ ಉದ್ಯೋಗಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Job Fair In Shahapur Yadgir On February 16

ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ ಪಾಸಾದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 35 ವರ್ಷಗಳು.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದೂರವಾಣಿ ಸಂಖ್ಯೆಗಳು 9448250868, 084737-253718.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+