ಶಿವಮೊಗ್ಗದಲ್ಲಿ ಡಿಸೆಂಬರ್ 28ರಂದು ಉದ್ಯೋಗ ಮೇಳ
ಬೆಂಗಳೂರು, ಡಿಸೆಂಬರ್ 25 : ಶಿವಮೊಗ್ಗದಲ್ಲಿ ಡಿಸೆಂಬರ್ 28ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 40ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯ ಮಿಷನ್, ಕೈಗಾರಿಕಾ ಮತ್ತು ಉದ್ಯೋಗ ಇಲಾಖೆ ವತಿಯಿಂದ ಡಿಸೆಂಬರ್ 28ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಳಗ್ಗೆ 9ರಿಂದ ನಗರದ ಎಟಿಎನ್‌ಸಿಸಿ ಕಾಲೇಜಿನಲ್ಲಿ ಮೇಳ ನಡೆಯಲಿದೆ.
ಆಟೋಮೊಬೈಲ್, ಬ್ಯಾಂಕಿಂಗ್, ರಿಟೇಲ್, ವಿಮೆ, ಗಾರ್ಮೆಂಟ್ಸ್, ಬಿ.ಪಿ.ಒ, ಭದ್ರತಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ರಾಜ್ಯದ ಸುಮಾರು 40ಕ್ಕೂ ಹೆಚ್ಚಿನ ಕಂಪನಿಗಳು ಇದರಲ್ಲಿ ಪಾಲ್ಗೊಳ್ಳಲಿವೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾ ಪೂರೈಸಿರುವ ಜಿಲ್ಲೆಯ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. 1500 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಅಭ್ಯರ್ಥಿಗಳು ರೆಸ್ಯೂಮ್, ವಿದ್ಯಾರ್ಹತೆ ಪ್ರಮಾಣ ಪತ್ರಗಳ ಜೊತೆ ಆಗಮಿಸಬೇಕಿದೆ. ಎಟಿಎನ್‌ಸಿಸಿ ಕಾಲೇಜಿನಲ್ಲಿ ಹೆಸರು ನೋಂದಣಿ ಮಾಡಿಕೊಂಡು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
'ಈ ಹಿಂದೆ ಏರ್ಪಡಿಸಿದ ಉದ್ಯೋಗ ಮೇಳಗಳಲ್ಲಿನ ನ್ಯೂನತೆಗಳನ್ನು ಸರಿಪಡಿಸಿಕೊಂಡು ಮೇಳವನ್ನು ವ್ಯವಸ್ಥಿತವಾಗಿ ಏರ್ಪಡಿಸಲಾಗುವುದು. ಅಲ್ಲದೇ ಜಿಲ್ಲೆಯ ಕಾಲೇಜುಗಳಲ್ಲಿ ಎಂಪ್ಲಾಯ್‍ಮೆಂಟ್ ಕ್ಲಬ್‍ಗಳನ್ನು ರಚಿಸಲು ಉದ್ದೇಶಿಸಲಾಗಿದೆ' ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಹೇಳಿದ್ದಾರೆ.
ಈ ಕ್ಲಬ್‍ಗಳಲ್ಲಿ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿ ಅರ್ಹರಿಗೆ ಕೃಷಿ, ಕೈಗಾರಿಕೆ, ವ್ಯಾಪಾರ, ಸ್ವಯಂ ಉದ್ಯೋಗ, ಬ್ಯಾಂಕ್, ಸಾಲ-ಸೌಲಭ್ಯ, ಮಾರುಕಟ್ಟೆ ಮುಂತಾದ ವಿಷಯಗಳ ಕುರಿತು ತರಬೇತಿ ನೀಡಲಾಗುವುದು ತರಬೇತಿ ನೀಡಲಿವೆ.












Click it and Unblock the Notifications