ಶಿವಮೊಗ್ಗ; ಜೂನ್ 27ರ ಮಂಗಳವಾರ ಉದ್ಯೋಗ ಮೇಳ
ಶಿವಮೊಗ್ಗ, ಜೂನ್ 26; ಉದ್ಯೋಗ ಹುಡುಕುತ್ತಿರುವ ಜನರಿಗೆ ಸಿಹಿಸುದ್ದಿ. ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಜೂನ್ 27ರ ಮಂಗಳವಾರ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. 18 ರಿಂದ 35 ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆರಂಭವಾಗಲಿದೆ. ವಿವಿಧ ಪ್ರತಿಷ್ಟಿತ ಖಾಸಗಿ ಕಂಪನಿಗಳು ಮೇಳದಲ್ಲಿ ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಈ ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಪದವಿ ಪಾಸ್ ಆದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಅಭ್ಯರ್ಥಿಗಳಿಗೆ 18 ರಿಂದ 35 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ.
ಆಸಕ್ತ, ಅರ್ಹ ಅಭ್ಯರ್ಥಿಗಳು ರೆಸ್ಯೂಮ್, ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 08182-255293, 9380663606, 9482023412, 9535312531.
ಅತಿಥಿ ಶಿಕ್ಷಕರ ನೇಮಕಾತಿ; ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಕರೆಯಲಾಗಿದೆ. ಆಸಕ್ತರು ಜೂನ್ 30ರೊಳಗೆ ಅರ್ಜಿ ಸಲ್ಲಿಸಬೇಕು.
ಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗಾಗಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಈ ವಸತಿ ಶಾಲೆಯಲ್ಲಿ ಖಾಲಿ ಇರುವ ಸಮಾಜ ವಿಜ್ಞಾನ ವಿಷಯದ 1 ಹುದ್ದೆಗೆ ಎಂಎ ಬಿಎಡ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬೇಕು.
1 ಗಣಕಯಂತ್ರ ವಿಜ್ಞಾನ ಶಿಕ್ಷರ ಹುದ್ದೆಗೆ ಬಿಎಸ್‌ಸಿ ಇನ್-ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹಾಗೂ 1 ಆರ್ಟ್ & ಕ್ರಾಫ್ಟ್ ಶಿಕ್ಷಕರ ಹುದ್ದೆಗೆ ಡಿಪ್ಲೋಮಾ ಇನ್-ಆರ್ಟ್ & ಕ್ರಾಫ್ಟ್ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 30ರೊಳಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆ ತಳಕಲ್ ಇಲ್ಲಿಗೆ ಸಲ್ಲಿಸಬೇಕು ಎಂದು ವಸತಿ ಶಾಲೆಯ ಪ್ರಾಶುಂಪಾಲರು ತಿಳಿಸಿದ್ದಾರೆ.












Click it and Unblock the Notifications