ಶಿವಮೊಗ್ಗದಲ್ಲಿ ಫೆಬ್ರವರಿ 23ರಂದು ಉದ್ಯೋಗ ಮೇಳ
ಶಿವಮೊಗ್ಗದಲ್ಲಿ ಫೆಬ್ರವರಿ 23ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆರಂಭವಾಗಲಿದೆ.
ಶಿವಮೊಗ್ಗ, ಫೆಬ್ರವರಿ 21; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಫೆಬ್ರವರಿ 23ರಂದು ಉದ್ಯೋಗ ಮೇಳ ಆಯೋಜನೆ ಮಾಡಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆರಂಭವಾಗಲಿದೆ. ಆಸಕ್ತರು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.
ಈ ಉದ್ಯೋಗ ಮೇಳದಲ್ಲಿ ಭಾವಹಿಸಲು ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ. ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಇತರ ಪದವಿ ಪಾಸಾಗಿರುವ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆಗಳು 08182-255293, 9380663606 ಮತ್ತು 9482023412, 9535312531.
ಸಂದರ್ಶನಗಳ ದಿನಾಂಕ ಬದಲು; ಶಿವಮೊಗ್ಗ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಬ್ಯಾಂಕ್ ನೇಮಕಾತಿಯ ಸಂದರ್ಶನದ ದಿನಾಂಕ ಬದಲಾವಣೆಯಾದ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಶಿವಮೊಗ್ಗ ಇಲ್ಲಿ ಖಾಲಿ ಇರುವ ಕಿರಿಯ ಸಹಾಯಕರು/ ನಗದು ಗುಮಾಸ್ತರು/ ಕ್ಷೇತ್ರಾಧಿಕಾರಿಗಳು, ಅಟೆಂಡರ್ ವಾಹನ ಚಾಲಕರ ಹಾಗೂ ಜಲಗಾರರ ಹುದ್ದೆಗಳಿಗೆ ಸಂದರ್ಶನ ನಿಗದಿ ಮಾಡಲಾಗಿತ್ತು.
ಫೆಬ್ರವರಿ 25ಕ್ಕೆ ನಡೆಯಬೇಕಿದ್ದ ಸಂದರ್ಶನವನ್ನು ಫೆಬ್ರವರಿ 28ಕ್ಕೆ ಹಾಗೂ ಫೆಬ್ರವರಿ 26ರಂದು ನಡೆಯಬೇಕಿದ್ದ ಸಂದರ್ಶನವನ್ನು ಮಾರ್ಚ್1 ರಂದು ನಡೆಸಲು ತೀರ್ಮಾನಿಸಲಾಗಿದೆ.
ಈಗಾಗಲೇ ಸಂಬಂಧಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ಕರೆಯೋಲೆ ಕಳುಹಿಸಲಾಗಿದೆ. ಇನ್ನುಳಿದಂತೆ ನೇಮಕಾತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.












Click it and Unblock the Notifications