ಶಿವಮೊಗ್ಗ; ಆಗಸ್ಟ್ 12ರಂದು ಉದ್ಯೋಗ ಮೇಳ
ಶಿವಮೊಗ್ಗ, ಆಗಸ್ಟ್ 10; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಆಗಸ್ಟ್ 12ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. 18 ರಿಂದ 35 ವರ್ಷ ವಯೋಮಿತಿಯ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಗಸ್ಟ್ 12ರಂದು ಬೆಳಗ್ಗೆ 10 ರಿಂದ ಉದ್ಯೋಗ ಮೇಳ ಆರಂಭವಾಗಲಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ.
ಈ ಉದ್ಯೋಗ ಮೇಳದಲ್ಲಿ ಎಸ್. ಎಸ್. ಎಲ್. ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗಬಹುದು.
ಉದ್ಯೋಗ ಮೇಳ ನಡೆಯುವ ವಿಳಾಸ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು. ಅಥವಾ ದೂರವಾಣಿ ಸಂಖ್ಯೆ 08182-255293/ 9380663606/ 9482023412 ಕರೆ ಮಾಡಬಹುದು.
ಆಗಸ್ಟ್ 18 ರಂದು ನೇರ ಸಂದರ್ಶನ; ಕೃಷಿ ವಿಶ್ವವಿದ್ಯಾಲಯದ (AICRP on EAAI) ಕೃಷಿಯಲ್ಲಿ ಶಕ್ತಿಯ ನಿರ್ವಹಣೆ ಯೋಜನೆಯಡಿ ಖಾಲಿ ಇರುವ ಒಂದು ಸೀನಿಯರ್ ರಿಸರ್ಚ್ ಫೆಲೊ ತಾತ್ಕಾಲಿಕ ಹುದ್ದೆ ಭರ್ತಿಗಾಗಿ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.
ಆಗಸ್ಟ್ 18ರ ಮಧ್ಯಾಹ್ನ 12.30ಕ್ಕೆ ನೇರ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://uasd.edu./ ಗೆ ಭೇಟಿ ನೀಡಬಹುದು.












Click it and Unblock the Notifications