ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನಲ್ಲಿ ಡಿಸೆಂಬರ್ 13ಕ್ಕೆ ಉದ್ಯೋಗ ಮೇಳ

ಶಿವಮೊಗ್ಗ, ಡಿಸೆಂಬರ್ 09; ಶಿವಮೊಗ್ಗದಲ್ಲಿ ಡಿಸೆಂಬರ್ 13ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 'ಸರ್ವರಿಗೂ ಉದ್ಯೋಗ' ಎಂಬ ಶೀರ್ಷಿಕೆ ಅಡಿಯಲ್ಲಿ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಶಿವಮೊಗ್ಗ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಸಹಭಾಗಿತ್ವದಲ್ಲಿ ಈ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಡಿಸೆಂಬರ್‌ 13ರ ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯ ತನಕ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ.

Job Fair In Shivamogga On December 13Th

7ನೇ ತರಗತಿ, ಎಸ್‍ಎಸ್‍ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ, ಯಾವುದೇ ಸ್ನಾತಕೋತ್ತರ ಪದವಿ ಮುಗಿಸಿದ ಶಿವಮೊಗ್ಗ, ಬೆಂಗಳೂರು ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಕೆಲಸ ಮಾಡಲು ಆಸಕ್ತಿಯುಳ್ಳ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದು.

ಆಸಕ್ತರು ಆನ್‌ಲೈನ್ ಮೂಲಕ ಹೆಸರು ನೋಂದಣಿ ಮಾಡಿಕೊಂಡು ಉದ್ಯೋಗ ಮೇಳಕ್ಕೆ ಆಗಮಿಸಬಹುದಾಗಿದೆ. ಹೆಸರು ನೋಂದಣಿಗೆ ಲಿಂಕ್ http://skillconnect.kaushalkar.com/candidatereg

ಉದ್ಯೋಗ ಮೇಳಕ್ಕೆ ಬರುವಾಗ ಕನಿಷ್ಟ 10 ಸ್ವ-ವಿವರ ಪ್ರತಿಗಳನ್ನು ಹಾಗೂ ಇತ್ತೀಚಿನ ಭಾವಚಿತ್ರಗಳನ್ನು ತರಬೇಕು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 08182 -255294, 8197176710, 9019485688 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.

ಅಪ್ರೆಂಟಿಸ್ ತರಬೇತಿಗೆ ನೇರ ಸಂದರ್ಶನ; ಬೆಂಗಳೂರು ಹೆಚ್. ಎ. ಎಲ್ ವತಿಯಿಂದ ಒಂದು ವರ್ಷದ ಡಿಪ್ಲೋಮಾ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ತರಬೇತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಡಿಸೆಂಬರ್ 15ರಂದು ಬೆಳಗ್ಗೆ 8 ಗಂಟೆಗೆ ಟೆಕ್ನಿಕಲ್ ಟ್ರೈನಿಂಗ್ ಇನ್ಸಿಟ್ಯೂಟ್, ಹಿಂದೂಸ್ತಾನ್ ಏರೋನಾಟಿಕ್ಸ್ .ಲಿ, ವಿಮಾನಪುರ ಅಂಚೆ, ಬೆಂಗಳೂರು-560017 ಇಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಆಡಳಿತ ಭವನ, ದಾವಣಗೆರೆ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08192-259446, 7406323294.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+