ಶಿವಮೊಗ್ಗದಲ್ಲಿ ಡಿಸೆಂಬರ್ 21ರಂದು ಉದ್ಯೋಗ ಮೇಳ
ಶಿವಮೊಗ್ಗ, ಡಿಸೆಂಬರ್ 20; ಜಿಲ್ಲಾ ಪಂಚಾಯತ್ ಶಿವಮೊಗ್ಗ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ದೀನ್‌ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಸಹಯೋಗದಲ್ಲಿ ಡಿಸೆಂಬರ್ 21ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಪ್ರವೇಶ ಉಚಿತವಾಗಿದೆ.
ಡಿಡಿಯು-ಜಿವೈಕೆ ಎಂಬುದು ಗ್ರಾಮೀಣ ಬಡ ನಿರುದ್ಯೋಗ ಯುವಜನತೆ ವಿವಿಧ ಕೌಶಲ್ಯಗಳನ್ನು ಹೊಂದಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಉದ್ಯೋಗ ಭದ್ರತೆ ಪಡೆಯುವ ಸಲುವಾಗಿ ಭಾರತ ಸರ್ಕಾರ ಅನುಷ್ಠಾನ ಮಾಡುತ್ತಿರುವ ಪ್ರತಿಷ್ಠಿತ ಕಾರ್ಯಕ್ರಮವಾಗಿದೆ.

ವಿದ್ಯಾರ್ಹತೆ; ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಯಾವುದೇ ಡಿಪ್ಲೋಮಾ, ಯಾವುದೇ ಪದವಿ, ಯಾವದೇ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.
ಗ್ರಾಮೀಣ ನಿರುದ್ಯೋಗಿ ಯುವಕ/ ಯುವತಿಯರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಮೇಳದಲ್ಲಿ 15ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ. ಆಸಕ್ತರು ಮೇಳದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಅಭ್ಯರ್ಥಿಗಳಿಗೆ ಸೂಚನೆಗಳು
* ಕನಿಷ್ಠ 10 ಬಯೋಡಾಟಾಗಳ ಝೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು
* ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಝೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.
* ಆಧಾರ್ ಕಾರ್ಡ್ ಝೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು
* ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕ ಕಟ್ಟಬೇಕಿಲ್ಲ
* ಮೇಳದಲ್ಲಿ ಪಾಲ್ಗೊಳ್ಳಲು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು
* ಆನ್‌ಲೈನ್ ನೋಂದಣಿ ಆಗದಿದ್ದರೆ ಸ್ಥಳದಲ್ಲಿಯೇ ನೋಂದಣಿ ಮಾಡಿಸಬೇಕು
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆ 9480876005/ 7760932206/ 9483815226.
ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ದಾವಣಗೆರೆ ಜಿಲ್ಲೆಯ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಾವಣಗೆರೆ, ಹೊನ್ನಾಳಿ, ಜಗಳೂರು, ಚನ್ನಗಿರಿ, ಹರಿಹರ ತಾಲ್ಲೂಕಿನಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 101 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗದವರಾಗಿದ್ದು 18 ರಿಂದ 35 ವರ್ಷದೊಳಗಿನ ವಯೋಮಾನದವರಾಗಿರಬೇಕು. ಕಾರ್ಯಕರ್ತೆಯರ ನೇಮಕಾತಿಗೆ 18 ರಿಂದ 45 ವರ್ಷದೊಳಗಿನ ವಯೋಮಿತಿ ನಿಗದಿ ಮಾಡಲಾಗಿದೆ.
ವಿಕಲಚೇತನ ವರ್ಗಕ್ಕೆ ಸಂಬಂಧಿಸಿದಂತೆ ಅರ್ಹ ಸ್ಥಳೀಯ (ಅದೇ ಗ್ರಾಮದ) ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್. ಎಸ್. ಎಲ್. ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯಾಗಲು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ ವಿದ್ಯಾರ್ಹತೆ 9ನೇ ತರಗತಿಯಾಗಿದೆ.
ಅರ್ಜಿ ಸಲ್ಲಿಸುವವರು 2022ರ ಜನವರಿ 18ರ ಸಂಜೆ 5.30 ಗಂಟೆಯೊಳಗೆ ಆನ್‍ಲೈನ್ http://davanagere.nic.in/ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08192-264056.
ತರಬೇತಿಗೆ ಅರ್ಜಿ ಹಾಕಿ; ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕ, ಯುವತಿಯರಿಗಾಗಿ 30 ದಿನಗಳ ಉಚಿತ ಕೌಶಲ್ಯ ಆಧಾರಿತ ತರಬೇತಿ ನೀಡಲಾಗುತ್ತಿದೆ. ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಉಚಿತ ಕೌಶಲ್ಯ ಆಧಾರಿತ ತರಬೇತಿಯಡಿ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಟ್ರೈನಿಂಗ್ ಹಮ್ಮಿಕೊಂಡಿದ್ದು, ಈ ತರಬೇತಿಯಿಂದ ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ. ತರಬೇತಿಗಳು ಊಟ-ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತವೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಡಿಸೆಂಬರ್ 25ರೊಳಗಾಗಿ ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್, ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಹಾಗೂ ಸಂಸ್ಥೆಯ ದೂರವಾಣಿ ಸಂಖ್ಯೆ 9483485489, 9482188780, 9743321062, 08284-295307, 08284-220807ಗೆ ಕರೆ ಮಾಡಬಹುದಾಗಿದೆ.












Click it and Unblock the Notifications