ಶಿವಮೊಗ್ಗ; ಫೆಬ್ರವರಿ 20ರಂದು ಉದ್ಯೋಗ ಮೇಳ
ಶಿವಮೊಗ್ಗ, ಫೆಬ್ರವರಿ 16; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಫೆಬ್ರವರಿ 20ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ನಿರುದ್ಯೋಗಿ ಯುವಕ/ ಯುವತಿಯರು ಮೇಳದ ಉಪಯೋಗ ಪಡೆದುಕೊಳ್ಳಬಹುದು.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಫೆಬ್ರವರಿ 20 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ಎನ್. ಸಿ. ಎಸ್. ಪಿ ಯೋಜನೆಯಡಿ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ 8ನೇ ತರಗತಿ, ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು 18 ರಿಂದ 35ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಬಯೋಡಾಟ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 08182-255294, 8861890866, 9980184267/ 9535312531/ 9482023412 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದದೆ.
ಉದ್ಯೋಗ ಮೇಳ ನಡೆಯುವ ಸ್ಥಳ; ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಸಾಗರ ರಸ್ತೆ ಗುತ್ಯಪ್ಪ ಕಾಲೋನಿ-ಪಂಪಾನಗರದ 2ನೇ ತಿರುವು, ಶಿವಮೊಗ್ಗ












Click it and Unblock the Notifications