ಶಿವಮೊಗ್ಗದಲ್ಲಿ ಫೆಬ್ರವರಿ 24, 25ರಂದು ಬೃಹತ್ ಉದ್ಯೋಗ ಮೇಳ

ಶಿವಮೊಗ್ಗ, ಫೆಬ್ರವರಿ 06 : ಶಿವಮೊಗ್ಗ ನಗರದಲ್ಲಿ ಫೆಬ್ರವರಿ 24 ಮತ್ತು 25ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಉದ್ಯೋಗ ಮೇಳದ ಕುರಿತು ಮಾಹಿತಿ ನೀಡಲು ವೆಬ್‍ಸೈಟ್ ಆರಂಭಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಉದ್ಯೋಗ ಮೇಳದ ವೆಬ್‌ಸೈಟ್ ಲೋಕಾರ್ಪಣೆಗೊಳಿಸಿದರು. "ಫೆಬ್ರವರಿ 24 ಮತ್ತು 25ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಪೂಜಿ ನಗರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ" ಎಂದರು.

ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಬೃಹತ್ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. ಮೇಳದಲ್ಲಿ ಖಾಸಗಿ ಕ್ಷೇತ್ರದ 120ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿವೆ. ಯುವಕ/ಯುವತಿಯರು ಮೇಳದ ಸದುಪಯೋಗವನ್ನು ಪಡೆದುಕೊಳ್ಳಬೇಕು.

Job Fair In Shivamogga On February 24 And 25

ಉತ್ಪಾದನಾ ವಲಯ ಮತ್ತು ಆಟೋ ಮೊಬೈಲ್ ಕ್ಷೇತ್ರದ ಕಂಪೆನಿಗಳನ್ನು ಮೇಳಕ್ಕೆ ಆಹ್ವಾನಿಸಲು ಕ್ರಮ ಕೈಗೊಳ್ಳಲಾಗಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಮೇಳದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಡಿಪ್ಲೋಮಾ ಪದವಿ, ಸ್ನಾತಕೋತ್ತರ ಪದವೀಧರರು ಪಾಲ್ಗೊಳ್ಳಬಹುದಾಗಿದೆ. ಮೇಳದಲ್ಲಿ ಪಾಲ್ಗೊಳ್ಳುವವರಿಗೆ 18 ರಿಂದ 40 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ.

ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರಿಗೆ ಅನುಕೂಲವಾಗುವಂತೆ ಉದ್ಯೋಗ ಮೇಳದ ಕುರಿತು ಮಾಹಿತಿ ನೀಡಲು www.shimogaudyogamela.in ವೆಬ್ ಸೈಟ್ ಆರಂಭಿಸಲಾಗಿದೆ.

ಸಂದರ್ಶನಕ್ಕೆ ಸಂಬಂಧಿಸಿದ ತರಬೇತಿಯನ್ನು ಪಡೆದುಕೊಳ್ಳಲು ಹಾಗೂ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತಿ ಇರುವವರು ವೆಬ್‍ಸೈಟ್‍ನಲ್ಲಿ ನೇರವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ [email protected] ಇ-ಮೇಲ್ ಅಥವ ದೂರವಾಣಿ ಸಂಖ್ಯೆ 8762778408, 9448787752, 7892548980, 08182-255293 ಕರೆ ಮಾಡಬಹುದಾಗಿದೆ. ಉದ್ಯೋಗ ಮೇಳಕ್ಕೆ ಪ್ರವೇಶ ಉಚಿತವಾಗಿರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+