ಶಿವಮೊಗ್ಗ: ಫೆಬ್ರವರಿ 24ರಂದು ಉದ್ಯೋಗ ಮೇಳ, ಅಭ್ಯರ್ಥಿಗಳಿಗೆ ಸೂಚನೆಗಳು

ಶಿವಮೊಗ್ಗ, ಫೆಬ್ರವರಿ 23: ಸರ್ವರಿಗೂ ಉದ್ಯೋಗ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಫೆಬ್ರವರಿ 24ರ ಸೋಮವಾರ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ನಿರುದ್ಯೋಗ ಯುವಕ/ ಯುವತಿಯರು ಮತ್ತು ಯುವನಿಧಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಈ ಉದ್ಯೋಗ ಮೇಳದಲ್ಲಿ ಅಗತ್ಯ ದಾಖಲೆಗಳ ಜೊತೆ ಪಾಲ್ಗೊಳ್ಳಬಹುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಪಾಲಿಸಬೇಕಾದ ಸೂಚನೆಗಳನ್ನು ಸಹ ನೀಡಲಾಗಿದೆ.

ಉದ್ಯೋಗ ಮೇಳದ ಕುರಿತು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ. ಎಸ್. ಚಂದ್ರಭೂಪಾಲ ಮಾಹಿತಿ ನೀಡಿದ್ದಾರೆ. ವಿದ್ಯಾರ್ಹತೆಗೆ ತಕ್ಕ ಉದ್ಯೋಗವನ್ನು ಪಡೆಯಲು ನಿರುದ್ಯೋಗ ಯುವಕ/ ಯುವತಿಯರು ಮತ್ತು ಯುವನಿಧಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಎಟಿಎನ್‌ಸಿಸಿ ಕಾಲೇಜಿನಲ್ಲಿ ಫೆಬ್ರವರಿ 24ರಂದು ಹಮ್ಮಿಕೊಂಡಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದ್ದಾರೆ.

Job Fair In Shivamogga On February 24 Essential Instructions For Candidates

ಕರ್ನಾಟಕ ಸರ್ಕಾರದ ಸರ್ವರಿಗೂ ಉದ್ಯೋಗ ಯೋಜನೆಯಡಿ ಕೌಶಲ್ಯಾಭಿವೃದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಗ್ಯಾರಂಟಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಂಟಿಯಾಗಿ ಉದ್ಯೋಗ ಮೇಳ ಆಯೋಜನೆ ಮಾಡಿದ್ದು, ಬೆಳಗ್ಗೆ 9 ಗಂಟೆಗೆ ಮೇಳಕ್ಕೆ ಚಾಲನೆ ಸಿಗಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಯೋಗ ಮೇಳ ಉದ್ಘಾಟಿಸಲಿದ್ದಾರೆ.

ಅಭ್ಯರ್ಥಿಗಳಿಗೆ ಸೂಚನೆಗಳು: ಈ ಉದ್ಯೋಗ ಮೇಳದಲ್ಲಿ ಇಂಜಿನಿಯರಿಂಗ್ ಪದವಿ, ಸ್ನಾತಕೋತ್ತರ ಪದವಿ, ಎಲ್ಲಾ ಪದವಿ/ ಡಿಪ್ಲೋಮಾ/ ಐಟಿಐ ಸೇರಿದಂತೆ ಪಿಯುಸಿ, ಎಸ್‌ಎಸ್‌ಎಲ್‌ಸಿ ಹಾಗೂ 7ನೇ ತರಗತಿ ಉತ್ತೀರ್ಣ ಹೊಂದಿರುವ ನಿರುದ್ಯೋಗ ಯುವಕರು ಮತ್ತು ಯುವತಿಯರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಉದ್ಯೋಗ ಮೇಳಕ್ಕೆ ಎಲ್ಲರಿಗೂ ಪ್ರವೇಶ ಉಚಿತ. ರಾಜ್ಯದ ಪ್ರತಿಷ್ಠಿತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ನೋಂದಾಯಿತ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರ ನೀಡಲಾಗುತ್ತದೆ.

ಮೇಳದಲ್ಲಿ ಪಾಲ್ಗೊಳ್ಳಲು ವಯೋಮಿತಿ 18 ರಿಂದ 35 ವರ್ಷಗಳು. ಉದ್ಯೋಗಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ ತಮಗೆ ಸೂಕ್ತವಾದ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಸಂದರ್ಶನ ನಡೆಸಲು ಪ್ರತಿಯೊಂದು ಕಂಪನಿಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಉದ್ಯೋಗ ಮೇಳಕ್ಕೆ ಆಗಮಿಸುವ ಯುವಕ/ ಯುವತಿಯರು ಕಡ್ಡಾಯವಾಗಿ ಬೆಳಗ್ಗೆ 9 ಗಂಟೆಗೆ ಹಾಜರಿರತಕ್ಕದ್ದು ಜೊತೆಯಲ್ಲಿ ಅಗತ್ಯ ದಾಖಲಾತಿಗಳಾದ ತಮ್ಮ ವಿದ್ಯಾಭ್ಯಾಸದ ಅಂಕಪಟ್ಟಿಯ ಪ್ರತಿ, ಆಧಾರ್ ಕಾರ್ಡ್, ಅನುಭವ ಪ್ರಮಾಣ ಪತ್ರ (ಇದ್ದರೆ), ರೆಸ್ಯೂಮ್ ತರಬೇಕು.

ನೋಂದಾಯಿತ ನಿರುದ್ಯೋಗಿಗಳು ಎಷ್ಟು ಸಂದರ್ಶನಕ್ಕೆ ಹಾಜರಾಗುತ್ತಾರೋ ಉದಾಹರಣೆಗೆ 1 ರಿಂದ 10 ಕಂಪನಿಗಳಿಗೆ ಸಂದರ್ಶನ ನೀಡಿದಲ್ಲಿ 10 ಸೆಟ್‌ಗಳಲ್ಲಿ ದಾಖಲಾತಿಯ ಜೆರಾಕ್ಸ್ ಪ್ರತಿಗಳನ್ನು ತರತಕ್ಕದ್ದು. ಉದ್ಯೋಗದಾತ ಸಂಸ್ಥೆಗಳ ಆಯ್ಕೆಯು ಅಂತಿಮವಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಹೆಸರು ನೋಂದಾಯಿಸಿಕೊಳ್ಳದಿದ್ದಲ್ಲಿ ಉದ್ಯೋಗ ಮೇಳದ ಸ್ಥಳದಲ್ಲಿಯೇ ಹೆಸರು ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+