ಶಿವಮೊಗ್ಗದಲ್ಲಿ ಜನವರಿ 24ರಂದು ಉದ್ಯೋಗ ಮೇಳ
ಶಿವಮೊಗ್ಗ, ಜನವರಿ 22 : ಸಹ್ಯಾದ್ರಿ ಉತ್ಸವದ ಅಂಗವಾಗಿ ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕ ಪಾವತಿ ಮಾಡಬೇಕಾಗಿಲ್ಲ.
ಜನವರಿ 24ರ ಗುರುವಾರ ಬೆಳಗ್ಗೆ 9 ಗಂಟೆಯಿಂದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ. 18 ರಿಂದ 35 ವರ್ಷ ವಯೋಮಿತಿಯ ಯುವಕ/ಯುವತಿಯರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯ ಮಿಷನ್ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಸಹಭಾಗಿತ್ವದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.

ದೇಶ ಮತ್ತು ರಾಜ್ಯ ಮಟ್ಟದ 80ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವನ್ನು ಮಾಡಲಿವೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವವರು ಸ್ವ ವಿವರದ ದಾಖಲಾತಿಗಳೊಂದಿಗೆ ಹಾಜರಾಗತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.












Click it and Unblock the Notifications