
ಶಿವಮೊಗ್ಗ: ಜನವರಿ 24ರಂದು ಉದ್ಯೋಗ ಮೇಳ
ಶಿವಮೊಗ್ಗ, ಜನವರಿ 23; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಜನವರಿ 24ರಂದು ಉದ್ಯೋಗ ಮೇಳ ಆಯೋಜನೆ ಮಾಡಿದೆ. 18 ರಿಂದ 35 ವರ್ಷದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜನವರಿ 24 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆರಂಭವಾಗಲಿದೆ. ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ.
ಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ; ಜ.30ರ ತನಕ ಅರ್ಜಿ ಹಾಕಿ
ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
KSAT Recruitment 2023 : ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ನೇಮಕಾತಿ, ಅರ್ಜಿ ಹಾಕಿ
ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಪ್ರವೇಶ ಉಚಿತವಾಗಿರುತ್ತದೆ.
ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ, ಬೆಂಗಳೂರಿನಲ್ಲಿ ಕೆಲಸ
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08182-255293, 9380663606/ 9482023412.
ಉದ್ಯೋಗ ಮೇಳ ನಡೆಯುವ ವಿಳಾಸ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಉದ್ಯೋಗ ಮೇಳ ನಡೆಯಲಿದೆ.
'ಸಿ' ವೃಂದದ ನೇಮಕಾತಿ ತಿದ್ದುಪಡಿ; ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರು 'ಸಿ' ವೃಂದದ ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಿತ್ತು. ದಿನಾಂಕ 12/11/2022 ಹಾಗೂ ಕರ್ನಾಟಕ ರಾಜ್ಯ ಪತ್ರ ದಿನಾಂಕ 18/10/2022ರಲ್ಲಿ ಪ್ರಕಟಿಸಲಾದ ಪ್ರಕಟಣೆಯಲ್ಲಿ ಬದಲಾವಣೆ ಮಾಡಲಾಗಿದೆ.
ಹಿಂದಿನ ಅಧಿಸೂಚನೆಯಲ್ಲಿ ಸರ್ಧಾತ್ಮಕ ಪರೀಕ್ಷೆಗಳ ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆ-1 ಸಾಮಾನ್ಯ ಕನ್ನಡ/ ಸಾಮಾನ್ಯ ಇಂಗ್ಲೀಷ್/ ಕಂಪ್ಯೂಟರ್ ಜ್ಞಾನ ಹಾಗೂ ಪ್ರಶ್ನೆ ಪತ್ರಿಕೆ-2 ಸಾಮಾನ್ಯ ಜ್ಞಾನ ಎಂದು ಪ್ರಕಟಿಸಲಾಗಿತ್ತು.
ಮೇಲಿನ ಪ್ರಕಟಣೆಗೆ ತಿದ್ದುಪಡಿಯನ್ನು ಮಾಡಲಾಗಿದೆ. 9/1/2023ರಡಿಯಲ್ಲಿ ತರಲಾಗಿದ್ದು ಸದರಿ ಪ್ರಕಟಣೆಯಂತೆ ಸ್ಪರ್ದಾತ್ಮಕ ಪರೀಕ್ಷೆಗಳ ವಸ್ತು ನಿಷ್ಠ ಬಹು ಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆ-1 ಸಾಮಾನ್ಯ ಜ್ಞಾನ ಹಾಗೂ ಪ್ರಶ್ನೆ ಪತ್ರಿಕೆ-2 ಸಾಮಾನ್ಯ ಕನ್ನಡ/ಸಾಮಾನ್ಯ ಇಂಗ್ಲೀಷ್/ ಕಂಪ್ಯೂಟರ್ ಜ್ಞಾನ ಎಂದು ಓದಿಕೊಳ್ಳತಕ್ಕದ್ದು.
ಈಗಾಗಲೇ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿರುವ ಮಾಜಿ ಸೈನಿಕ ಅಭ್ಯರ್ಥಿಗಳು ಸದರಿ ಮಾಹಿತಿಯನ್ನು ಕರ್ನಾಟಕ ರಾಜ್ಯ ಪತ್ರ ದಿನಾಂಕ 13/01/2023ರ ಸಂಚಿಕೆ 215 ಭಾಗ-5 ರಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂರವಾಣಿ ಸಂಖ್ಯೆ 08182-220925 ಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.