India
  • search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗದಲ್ಲಿ ಜೂನ್ 27ರಂದು ಉದ್ಯೋಗ ಮೇಳ, ಇತರ ಉದ್ಯೋಗ ಮಾಹಿತಿ

|
Google Oneindia Kannada News

ಶಿವಮೊಗ್ಗ, ಜೂನ್ 24; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಜೂನ್ 27ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. 18 ರಿಂದ 35 ವಯೋಮಿತಿಯ ಅಭ್ಯರ್ಥಿಗಳು ಮೇಳದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಜೂನ್ 27ರ ಸೋಮವಾರ ಬೆಳಗ್ಗೆ 10ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿ ಆಯ್ಕೆ ಮಾಡಲಿದ್ದಾರೆ.

ಎಸ್‌ಬಿಐ ನೇಮಕಾತಿ; ಬೆಂಗಳೂರಲ್ಲಿ 23 ಹುದ್ದೆಗೆ ಅರ್ಜಿ ಹಾಕಿ ಎಸ್‌ಬಿಐ ನೇಮಕಾತಿ; ಬೆಂಗಳೂರಲ್ಲಿ 23 ಹುದ್ದೆಗೆ ಅರ್ಜಿ ಹಾಕಿ

ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ 08182-255293/ 9108235132/ 8151093947 ಕರೆ ಮಾಡಬಹುದು.

ರಂಗಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ, ಜುಲೈ 8ರ ತನಕ ಅರ್ಜಿ ಹಾಕಿ ರಂಗಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ, ಜುಲೈ 8ರ ತನಕ ಅರ್ಜಿ ಹಾಕಿ

ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವವರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ. ಉದ್ಯೋಗ ಮೇಳ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ವಿಳಾಸದಲ್ಲಿ ನಡೆಯಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ; ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಹಾಕಿ ಬೆಂಗಳೂರು ಗ್ರಾಮಾಂತರ ಜಿಲ್ಲೆ; ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಹಾಕಿ

ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಹಾಕಿ

ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಹಾಕಿ

ದಾವಣಗೆರೆ ತಾಲ್ಲೂಕಿನ ಅಣಜಿ ಹೋಬಳಿ ಗುಡಾಳು ವೃತ್ತದ ಗ್ರಾಮ ಸಹಾಯಕರ ಹುದ್ದೆ ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಗತ್ಯ ದಾಖಲಾತಿಗಳ ಜೊತೆ ವಿವರಗಳನ್ನು ಜುಲೈ11ರ ಸಂಜೆ 5.30ರೊಳಗೆ ಸಲ್ಲಿಸಬೇಕು. ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ಅಭ್ಯರ್ಥಿಗೆ ಓದಲು ಹಾಗೂ ಬರೆಯಲು ಚೆನ್ನಾಗಿ ಬರಬೇಕು. ಕನಿಷ್ಟ ವಯೋಮಿತಿ 25 ವರ್ಷಗಳು. ಅರ್ಜಿದಾರರು ಖಾಲಿ ಇರುವ ಗ್ರಾಮ ಸಹಾಯಕ ಹುದ್ದೆಯ ವೃತ್ತದ ನಿವಾಸಿಯಾಗಿರಬೇಕು ಮತ್ತು ಕೇಂದ್ರ ಸ್ಥಾನದಲ್ಲಿಯೇ ವಾಸವಾಗಿರಬೇಕು. ಗ್ರಾಮಸಹಾಯಕ, ತಳವಾರರು, ತೋಟಿಗಳು, ನೀರುಗಂಟಿಗಳು, ವಾಲಿಕರ್ಸ್, ಮಹರ್ಸ್, ಬಾರಿಕರ್ಸ್, ನೀರಾಡಿಗಳು, ಬಲೂತಿದಾರ್ಸ್, ತಳಯಾರಿಸ್, ವೆಟಿಸ್, ಕುಲುವಡಿಸ್, ಉರ್‍ಗಾನಿಸ್ ಕುಟುಂಬದವರಿಗೆ ಆದ್ಯತೆ ನೀಡಲಾಗುತ್ತದೆ.

ಉದ್ಯಮಶೀಲತಾ ತರಬೇತಿಗೆ ಆನ್‍ಲೈನ್ ಅರ್ಜಿ ಆಹ್ವಾನ

ಉದ್ಯಮಶೀಲತಾ ತರಬೇತಿಗೆ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗದ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಮಹಿಳಾ ಪದವೀಧರರಿಗೆ ಉದ್ಯಮಶೀಲತಾ ತರಬೇತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. 20/7/2022ರೊಳಗೆ ಆಸಕ್ತರು ಅರ್ಜಿ ಸಲ್ಲಿಸಬಹುದು.

ವೆಬ್‍ಸೈಟ್ www.sw.kar.nic.in ಮೂಲಕ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ಹೇಳಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-249241 / 9482300400 ಕರೆ ಮಾಡಬಹುದು.

ಉದ್ಯೋಗ ಸೃಜನೆ ಯೋಜನೆಯಡಿ ಅರ್ಜಿ ಹಾಕಿ

ಉದ್ಯೋಗ ಸೃಜನೆ ಯೋಜನೆಯಡಿ ಅರ್ಜಿ ಹಾಕಿ

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಬ್ಯಾಂಕುಗಳಿಂದ ಸಾಲ ಪಡೆದು ಗ್ರಾಮೀಣ ಪ್ರದೇಶಗಳಲ್ಲಿ ಉತ್ಪಾದನಾ ಮತ್ತು ಸೇವಾ ವಲಯದ ಚಟುವಟಿಕೆ ಪ್ರಾರಂಭಿಸಲು ಕೇಂದ್ರ ಸರ್ಕಾರದಿಂದ ಶೇ. 25 ರಿಂದ 35ರ ವರೆಗೆ ಮತ್ತ ನಗರ ಪ್ರದೇಶದಲ್ಲಿ ಶೇ.15 ರಿಂದ 25ರವರೆಗೆ ಸಹಾಯಧನ ಲಭ್ಯವಿದೆ. ಯೋಜನೆಯಡಿ ಹೊಸದಾಗಿ ಚಟುವಟಿಕೆಗಳನ್ನು ಪ್ರಾರಂಭಿಸಲು ಇಚ್ಛಿಸುವ ಶಿವಮೊಗ್ಗ ಜಿಲ್ಲೆಯ ಆಸಕ್ತ ಯುವಕ/ ಯುವತರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಯೋಜನೆಯಡಿ ಉತ್ಪಾದನಾ ಘಟಕಗಳಿಗೆ 50 ಲಕ್ಷ ಮತ್ತು ಸೇವಾ ಘಟಕಗಳಿಗೆ 20 ಲಕ್ಷ ಗರಿಷ್ಠ ಯೋಜನಾ ವೆಚ್ಚದ ಘಟಕಗಳಿಗೆ ಬ್ಯಾಂಕುಗಳಿಂದ ಆರ್ಥಿಕ ನೆರವು ಪಡೆಯಲು ಅವಕಾಶವಿದೆ. www.kviconline.gov.in/pmegpeportal ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳನ್ನು ಸಂಪರ್ಕಿಸಿ, ಕರೆ ಮಾಡಲು ನಂಬರ್ 08182-223273 / 9480825637.

ಕಚೇರಿ ಸಹಾಯಕರು, ಆಫೀಸರ್ ಹುದ್ದೆ ನೇಮಕ

ಕಚೇರಿ ಸಹಾಯಕರು, ಆಫೀಸರ್ ಹುದ್ದೆ ನೇಮಕ

ಗ್ರಾಮೀಣ ಬ್ಯಾಂಕ್‍ಗಳಲ್ಲಿ ಖಾಲಿ ಇರುವ 8,106 ಕಚೇರಿ ಸಹಾಯಕರು ಮತ್ತು ಆಫಿಸರ್ ಹುದ್ದೆಗಳ ನೇಮಕಕ್ಕೆ ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆ ಅಧಿಸೂಚನೆಯನ್ನು ಐಬಿಪಿಎಸ್ ಪ್ರಕಟಿಸಿದೆ. ಅರ್ಜಿಗಳನ್ನು ಜೂನ್ 27ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ https://www.ibps.in/ ವೀಕ್ಷಿಸಬಹುದಾಗಿದೆ.

ಈ ಬ್ಯಾಂಕ್ ಪರೀಕ್ಷೆಗಳಿಗೆ ಮತ್ತು ಮುಂಬರುವ ಎಲ್ಲಾ ಬ್ಯಾಂಕ್ ಪರೀಕ್ಷೆಗಳಿಗೆ ದೇಶಾದ್ಯಂತ ಸಾವಿರಾರು ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ತರಬೇತಿ ನೀಡಿರುವ ಅನುಭವಿ ನುರಿತ ವಿಷಯ ತಜ್ಞರಿಂದ ಹಾಸನದ ಸಾಲಗಾಮೆ ರಸ್ತೆ ಬಳಿಯಿರುವ ಕೃಷಿಕ್ ಸರ್ವೋದಯ ಫೌಂಡೇಶನ್ ಹಾಸನ ಶಾಖೆಯಲ್ಲಿ ರಿಯಾಯಿತಿ ದರದಲ್ಲಿ ಆಫ್‍ಲೈನ್ ತರಬೇತಿ ಪ್ರಾರಂಭವಾಗುತ್ತಿದೆ. ಆಸಕ್ತರು ಜೂನ್ 27 ರೊಳಗೆ ಮೊಬೈಲ್ ಸಂಖ್ಯೆ 8660217739 ಅಥವಾ 08172-245135 ಕ್ಕೆ ಕರೆ/ ವಾಟ್ಸಾಪ್ ಮಾಡಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.

English summary
Shivamogga district employment exchange office organized job fair on June 27th, 2022. 18 to 35 age group candidates can attend.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X