ಶಿವಮೊಗ್ಗದಲ್ಲಿ ಜೂನ್‌ 29ರಂದು ಉದ್ಯೋಗ ಮೇಳ, ಪ್ರವೇಶ ಉಚಿತ

ಶಿವಮೊಗ್ಗ, ಜೂನ್ 26: ಶಿವಮೊಗ್ಗದಲ್ಲಿ ಉದ್ಯೋಗ ಮೇಳವನ್ನು ಜೂನ್ 29ರಂದು ಆಯೋಜನೆ ಮಾಡಲಾಗಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ಮೇಳದಲ್ಲಿ ಪಾಲ್ಗೊಳ್ಳಬಹುದು.

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ.

Job Fair In Shivamogga On June 29 Entry Free

ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಪ್ರವೇಶ ಉಚಿತ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-255293/ 9108235132/8151093747/ 9482023412 ಮೂಲಕ ಸಂಪರ್ಕಿಸಬಹುದು.

ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ: ದಾವಣಗೆರೆಯಲ್ಲಿ ಜಲ ಜೀವನ್ ಮಿಷನ್ ಅಡಿ ಎಂಐಎಸ್ ಸಮಾಲೋಚಕರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ, ಹೊರಗುತ್ತಿಗೆ ಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಜುಲೈ 5 ಕೊನೆಯ ದಿನವಾಗಿದೆ.

ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಜಲ ಜೀವನ್ ಮೀಷನ್ ಯೋಜನೆಯಡಿ ಖಾಲಿ ಇರುವ ಜಿಲ್ಲಾ ಎಂಐಎಸ್, ಎಂಐಎಸ್ ಸಮಾಲೋಚಕರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಂ.ಸಿ.ಎ, ಎಂ.ಎಸ್ಸಿ ಕಂಪ್ಯೂಟರ್ ಸೈನ್ಸ್, ಬಿ.ಇ ಕಂಪ್ಯೂಟರ್ ಸೈನ್ಸ್‌ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಡೇಟಾ ನಿರ್ವಹಣೆಯಲ್ಲಿ 3-5 ವರ್ಷಗಳ ಅನುಭವ ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರ್ಯ ನಿರ್ವಾಹಕ ಇಂಜಿನಿಯರ್ ದಾವಣಗೆರೆ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

ಜೂನ್ 27ರಂದು ಉದ್ಯೋಗ ಮೇಳ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗಮೇಳವನ್ನು ಜೂನ್ 27ರಂದು ಬೆಳಗ್ಗೆ 10.30ರಿಂದ ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಪ್ಯಾಲೇಸ್ ಟೊಯಾಟೋ ಕುಶಾಲನಗರ. ಅಟೋಲೈವ್ ಮಲ್ಟಿನ್ಯಾಷನಲ್ ಕಂಪನಿ, ಮೈಸೂರು. ಕ್ಲಬ್ ಮಹೀಂದ್ರ ಮಡಿಕೇರಿ. ಕಲ್ಯಾಣಿ ಮೋಟಾರ್ಸ್ ಮಡಿಕೇರಿ.ಕಾವೇರಿ ಹೋಂಡಾ ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದು. ಅಭ್ಯರ್ಥಿಗಳು ಆಸಕ್ತ ದಾಖಲೆಗಳ ಜೊತೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+